ಬೆಳಗಾವಿ : ಕುಡಿದ ಮತ್ತಿನಲ್ಲಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಕಂದಕಕ್ಕೆ ಉರುಳಿದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದ ಬಳಿ ನಡೆದಿದೆ.
ಎಸ್.ಕೆ ಹಿರೆಕೊಪ್ಪ ಗ್ರಾಮದ ಸಿದ್ದೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಬಸ್ಸು ಇದಾಗಿದ್ದು 40 ಕ್ಕೂ ಹೆಚ್ಚು ಪುಟ್ಟ ಮಕ್ಕಳು ಈ ಬಸ್ಸಿನಲ್ಲಿ ಇದ್ದರೆಂದು ತಿಳಿದಿದೆ.ಕುಡಿದ ಮತ್ತಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಕಂದಕಕ್ಕೆ ಉರುಳಿದ್ದು ಶಾಲೆ ಮುಗಿದ ನಂತರ ಮಕ್ಕಳನ್ನು ಮನೆಗೆ ಬಿಡಲು ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಪುಣ್ಯಕ್ಕೆ ಮಕ್ಕಳಿಗೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲವೆಂದು ಮಾಹಿತಿ ದೊರೆತಿದ್ದು ಕುಡಿದ ಮತ್ತಿನಲ್ಲಿದ್ದ ಚಾಲಕನ ವಿರುದ್ದ ಪಾಲಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


