Friday, January 16, 2026
Flats for sale
Homeರಾಜಕೀಯಮಂಗಳೂರು : ದ್ವೇಷ ಭಾಷಣ ಮಸೂದೆಯಿಂದ ರಾಜ್ಯದ ಜನರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ : ಬಿಜೆಪಿ...

ಮಂಗಳೂರು : ದ್ವೇಷ ಭಾಷಣ ಮಸೂದೆಯಿಂದ ರಾಜ್ಯದ ಜನರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ : ಬಿಜೆಪಿ ರಾಜ್ಯ ವಕ್ತಾರೆ ಸುರಭಿ ಹೊದಿಗೆರೆ.

ಮಂಗಳೂರು : ರಾಜ್ಯ ಸರಕಾರದ ದ್ವೇಷ ಭಾಷಣ ಮಸೂದೆಯಿಂದ ರಾಜ್ಯದ ಜನರ ಅಭಿವ್ಯಕ್ತಿ ಸ್ವಾತಂತ್ರ್ಯ ಧಕ್ಕೆ ತಂದಿದೆ ಎಂದು ಬಿಜೆಪಿ ರಾಜ್ಯ ವಕ್ತಾರೆ ಸುರಭಿ ಹೊದಿಗೆರೆ ಹೇಳಿದ್ದಾರೆ.ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರಕಾರದ ವಿರುದ್ಧ ಹರಿಹಾಯ್ದರು.

ಇಂದು ರಾಜ್ಯದ ಜನರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿ ಮತ್ತುರಾಜ್ಯದ ಜನರನ್ನು ಭಯಗೊಸಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ದ್ವೇಷ ಭಾಷಣ ಮಸೂದೆ ತರಲು ಉದ್ದೇಶ ಇವರದಾಗಿದೆ. ದ್ವೇಷ ಭಾಷಣ ಮಸೂದೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಭಾರೀ ಧಕ್ಕೆ ತರುತ್ತದೆ , ಈ ಮಸೂದೆಯನ್ನು ಸೂಕ್ತ ಚಿಂತನೆ, ಸಮಾಲೋಚನೆ ಹಾಗೂ ತಜ್ಞರ ಸಲಹೆ ಇಲ್ಲದೆ, ಏಕಪಕ್ಷೀಯವಾಗಿ ರೂಪಿಸಿ ಚರ್ಚೆಗಳನ್ನು ನಡೆಸದೆ ಜಾರಿಗೆ ತಂದಿದ್ದಾರೆಂದು ಹೇಳಿದರು.

“ಅಭಿವ್ಯಕ್ತಿ ಸ್ವಾತಂತ್ರ್ಯದಂತಹ ಅತ್ಯಂತ ಗಂಭೀರ ವಿಷಯದ ಬಗ್ಗೆ ಮಸೂದೆ ತರಬೇಕಾದರೆ ಸಾಕಷ್ಟು ಚರ್ಚೆ ನಡೆಸಬೇಕು . ಇಲ್ಲಿ ಯಾರೊಂದಿಗೆ ಸಮಾಲೋಚನೆ ಮಾಡಿಲ್ಲ. ದ್ವೇಷ ಭಾಷಣ ಮತ್ತು ಅಪರಾಧ ಎರಡನ್ನೂ ಒಂದೇ ಎಂದು ಪರಿಗಣಿಸಲಾಗುತ್ತಿದೆ. ಮಸೂದೆಯ ವ್ಯಾಖ್ಯಾನವೇ ಸರಿಯಾಗಿಲ್ಲ ಇದು ಭಾವನಾತ್ಮಕವಾಗಿ ರೂಪಿಸಿದ ಮಸೂದೆ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿಲ್ಲ” ಎಂದು ಸರಕಾರದ ನಡೆಯ ಬಗ್ಗೆ ವ್ಯಂಗ್ಯವಾಡಿದರು.

ಈಗಾಗಲೇ ಭಾರತೀಯ ನ್ಯಾಯ ಸಂಹಿತೆ (BNS) ಅಸ್ತಿತ್ವದಲ್ಲಿರುವಾಗ, ಹೆಚ್ಚುವರಿಯಾಗಿ ಹೊಸ ಮಸೂದೆ ತರಬೇಕಾದ ಅವಶ್ಯಕತೆ. ಏನಿತ್ತು .’ದ್ವೇಷ ಭಾಷಣ ಮಾಡುವ ಶಂಕೆಯ ಆಧಾರದ ಮೇಲೆ ಮುಂಚಿತವಾಗಿ ಬಂಧಿಸುವ ಉದ್ದೇಶ ಈ ಮಸೂದೆಯಲ್ಲಿ ಅಡಗಿದೆ. ಇದು ಭಾರೀ ದುರುಪಯೋಗಕ್ಕೆ ಕಾರಣ. ಈ ಮಸೂದೆಯಿಂದ ಇಲೆಕ್ಟ್ರಾನಿಕ್ ಮಾಧ್ಯಮ, ಸಾಮಾಜಿಕ ಮಾಧ್ಯಮ ಹಾಗೂ ವಿವಿಧ ಸಂಘಟನೆಗಳು ಗುರಿಯಾಗುವ ಸಾಧ್ಯತೆವಿದೆ “ಈ ಮಸೂದೆ ಸಂಸ್ಥೆಗಳನ್ನೇ ಗುರಿಯಾಗಿಸಿಕೊಂಡು ರೂಪಿಸಲಾಗಿದೆ.
ಕಾಂಗ್ರೆಸ್ ನಾಯಕರ ಪದಪ್ರಯೋಗಗಳನ್ನು ರಾಜ್ಯ ಈಗಾಗಲೇ ಕಂಡಿದೆ ಎಂದರು. ಬಳ್ಳಾರಿ ಶಾಸಕ ಭರತ್ ಶೆಟ್ಟಿಯ ಪದ ಬಳಕೆ ಮಹಿಳೆಯಾಗಿ ಕೇಳಲು ಸಹ ಮುಜುಗರವಾಗುವಂತಹದ್ದು. ಆದರೆ ಸರ್ಕಾರದ ದ್ವೇಷ ಭಾಷಣ ಮಸೂದೆ ಕಾಂಗ್ರೆಸ್ ನಾಯಕರಿಗೆ ಅನ್ವಯವಾಗುವುದಿಲ್ಲ.ಇದು ಸಂಪೂರ್ಣವಾಗಿ ಬಿಜೆಪಿಯನ್ನು ಗುರಿಯಾಗಿಸಿಕೊಂಡು ತರಲಾದ ಮಸೂದೆ” ಎಂದು ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರರಾದ ಅರುಣ್ ಶೆಟ್ಟಿ ಮಾಧವ ಮೋರೆ, ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಹಾಗೂ ಮಾಧ್ಯಮ ಸಹ ಸಂಚಾಲಕ ಹೇಮಂತ್ ಶೆಟ್ಟಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular