ಬೆಂಗಳೂರು : 2025 ಜುಲೈ 7ರಂದು ಹೆದ್ದಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋ ಕರುಗಳ ಮಾಂಸ ಸಾಗಿಸುತ್ತಿದ್ದ ಬೊಲೆರೊ ವಾಹನವನ್ನು ತಡೆದು ಚಾಲಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು ಈ ಪ್ರಕರಣದಲ್ಲಿ ಕೋರ್ಟ್ ಗೆ ಹಾಜರಾಗದ ಹಿನ್ನೆಲೆ ಪುನೀತ್ ಕೆರೆಹಳ್ಳಿ ವಿರುದ್ಧ ವಾರೆಂಟ್ ಜಾರಿಯಾಗಿತ್ತು, ಇದೀಗ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಬಂದಿದ್ದ ವೇಳೆ ಬಾಗಲಗುಂಟೆ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಬಾಗಲಗುಂಟೆ ಪೊಲೀಸರು ನ್ಯಾಯಾಲಕ್ಕೆ ಹಾಜರುಪಡಿಸಲಿದ್ದಾರೆಂದು ತಿಳಿದುಬಂದಿದೆ.


