ಮಂಗಳೂರು : ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಅನೇಕ ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದು ಸ್ಥಳೀಯರು ಭಯಭೀತರಾಗಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಮೂರು ವಾರದ ಹಿಂದೆ ರೈತನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆಯಾಗಿದೆ.ಚಿರತೆ ಹಾವಳಿಯಿಂದ ಬೆಳ್ತಂಗಡಿ ತಾಲೂಕಿನ ರೈತರು ಕಂಗೆಟ್ಟಿದ್ದರು. ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.
ವಿಶೇಷ ತಂಡ ರಚಿಸಿ ತಾಲೂಕಿನ ಅನೇಕ ಕಡೆಗಳಲ್ಲಿ ಅರಣ್ಯ ಇಲಾಖೆ ಬೋನ್ ಅಳವಡಿಗೆ ಮಾಡಿದ್ದು ಚಿರತೆ ಬೋನ್ ಗೆ ಬೀಳುವ ದೃಶ್ಯ ಸಿ ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.


