ಶಿವಮೊಗ್ಗ : ಹಿರಿಯ ರಾಜಕಾರಣಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಮಾರಿಕಾಂಬ ದೇವಿಪಡೆಯುತ್ತಿದ್ದ ವೇಳೆ ತೀವ್ರ ಅಸ್ವಸ್ಥಕ್ಕೆ ಒಳಗಾಗಿದ್ದಾರೆ.
ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆಂಬ ಮಾಹಿತಿ ದೊರೆತಿದ್ದು ಆಂಬುಲೆನ್ಸ್ ಮೂಲಕ ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದಿನಿಂದ ಸಾಗರದ ಮಾರಿಕಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಿದ್ದು ಈ ಹಿನ್ನೆಲೆ ದೇವಿಯ ದರ್ಶನ ಪಡೆಯಲು ಬಂದಿದ್ದರು.
ದೇವಸ್ಥಾನದಲ್ಲಿ ತೀವ್ರ ಜನಸಂದಣಿ ಇದ್ದಿದ್ದರಿಂದ ಉಸಿರಾಟ ಸಮಸ್ಯೆಯಾಗಿದ್ದು,ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಯಿಂದಾಗಿ ಆರೋಗ್ಯ ಸುಧಾರಣೆಯಾಗಿದೆ. ಅರೋಗ್ಯ ಚೇತರಿಕೆ ಕಂಡು ಬರುತ್ತಿದೆ ಎಂದು ಮೂಲಗಳು ತಿಳಿಸಿವೆ.


