Monday, February 9, 2026
Flats for sale
Homeವಿದೇಶಮಸ್ಕತ್ : ಒಮಾನ್‌ನಲ್ಲಿ ಭೀಕರ ರಸ್ತೆ ಅಪಘಾತ : ಕಾಪುವಿನ ಯುವಕ ಸೇರಿ ಮೂವರು ಸಾವು.

ಮಸ್ಕತ್ : ಒಮಾನ್‌ನಲ್ಲಿ ಭೀಕರ ರಸ್ತೆ ಅಪಘಾತ : ಕಾಪುವಿನ ಯುವಕ ಸೇರಿ ಮೂವರು ಸಾವು.

ಮಸ್ಕತ್ : ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾದ ವಿಲಾಯತ್‌ನಲ್ಲಿ ಭಾನುವಾರ ನಡೆದ ಭೀಕರ ವಾಹನ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಕಾಪು ಉಚ್ಚಿಲ ಕಲತೂರ್‌ ನಿವಾಸಿ ಚೇತನ್ (26) ಸೇರಿದಂತೆ ಮೂವರು ಮೃತಪಟ್ಟಿದ್ದು ಹಾಗೂ ಮೂವರು ಗಾಯಗೊಂಡ ಘಟನೆ ವರದಿಯಾಗಿದೆ.

ನಾಗರಿಕ ರಕ್ಷಣಾ ಮತ್ತು ಆಂಬ್ಯುಲೆನ್ಸ್ ಪ್ರಾಧಿಕಾರದ ವರದಿಗಳ ಪ್ರಕಾರ, ಅಪಘಾತವು ಮೂರು ವಾಹನಗಳ ನಡುವೆ ಉಂಟಾಗಿದ್ದು ಮುಂಜಾನೆಯ ಹೊತ್ತಲ್ಲಿ ನಡೆದಿದೆ ಎಂದು ತಿಳಿದಿದೆ.ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಗಂಭೀರವಾಗಿ ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಆಗಮಿಸಿದ ರಕ್ಷಣಾ ಸಿಬ್ಬಂದಿಗಳು ಅವಶೇಷಗಳಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಗಾಯಾಳುಗಳನ್ನು ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular