ಮಂಗಳೂರು : ನಗರದ ಹೊರವಲಯದಲ್ಲಿರುವ ಶಕ್ತಿನಗರದ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.
ಶಕ್ತಿನಗರದ ಕಾರ್ಡೆಲ್‌ನ ಎವೆಲಿನ್ ಡಿ’ಸಿಲ್ವಾ ಅವರ ನಿವಾಸದ ಬಳಿ ಚಿರತೆ ಕಾಣಿಸಿಕೊಂಡಿದೆ. ಈ ಪ್ರದೇಶದಲ್ಲಿ ಹಲವಾರು ಮನೆಗಳು ಮತ್ತು ಹೆಚ್ಚಿನ ಸಂಖ್ಯೆಯ ಮಕ್ಕಳಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸುವ ಮೊದಲು ಅರಣ್ಯ ಇಲಾಖೆ ತಕ್ಷಣ ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.


