Friday, February 20, 2026
Flats for sale
Homeಜಿಲ್ಲೆಪುತ್ತೂರು : ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ MDMA ಸಾಗಾಟ ಮಾಡುತ್ತಿದ್ದ ಅಂತರ್ ರಾಜ್ಯದ...

ಪುತ್ತೂರು : ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ MDMA ಸಾಗಾಟ ಮಾಡುತ್ತಿದ್ದ ಅಂತರ್ ರಾಜ್ಯದ ಮೂವರು ಆರೋಪಿಗಳ ಬಂಧನ.

ಪುತ್ತೂರು : ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ MDMA ಮಾದಕವಸ್ತು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಖಚಿತ ಮಾಹಿತಿಯ ಮೇರೆಗೆ ಪೊಲೀಸರು ವಾಹನವೊಂದನ್ನು ತಡೆದು ಪರಿಶೀಲಿಸಿದಾಗ ವಾಹನದಲ್ಲಿ ಮಾರಾಕಾಯುಧವಾದ ತಲವಾರನ್ನು ಇಟ್ಟುಕೊಂಡು, ಸುಮಾರು 5,38,800 ಮೌಲ್ಯದ 53.58 ಗ್ರಾಂ MDMA ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸಿದ್ದಾರೆಂದು ತಿಳಿದುಬಂದಿದೆ.

ಬಂಧಿತ ಆರೋಪಿಗಳನ್ನು ಕೇರಳ ಕೋಝಿಕೋಡ್ ಜಿಲ್ಲೆಯ ಮುಹಮ್ಮದ್‌ ಅಜ್ಮಲ್‌ ಸಿ (30) ,ಇಸ್ಮಾಯಿಲ್‌ (28) ಸಂಶೀರ್‌ (27) ಎಂದು ತಿಳಿದುಬಂದಿದೆ. ಆರೋಪಿಗಳಿಂದ ಕಾರು, ಮಾರಕಾಸ್ತ್ರ, ಮೊಬೈಲ್‍ಗಳು ಹಾಗೂ ನಗದು ರೂ. 10,000/- ವಶಪಡಿಸಿಕೊಂಡು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 25/2026 ಕಲಂ 8C, 22(C), 29 NDPS Act 1985 & ಕಲಂ: 25(1B)(B) Arms Act ನಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ಕೇರಳ ,ಗೋವಾ, ಹಾಗೂ ಕರ್ನಾಟಕ ರಾಜ್ಯಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡುತ್ತಿದ್ದು, ಕೇರಳ ರಾಜ್ಯದ ಕೋಝಿಕೋಡು, ಕಣ್ಣೂರು, ವಯನಾಡ್‍ ಜಿಲ್ಲೆಗಳಲ್ಲಿ ಪ್ರಕರಣ ದಾಖಲಾಗಿ, ತಲೆಮರೆಸಿಕೊಂಡಿರುವುದಾಗಿದೆ. ಅಲ್ಲದೆ ಮುಹಮ್ಮದ್‌ ಅಜ್ಮಲ್‌ ಸಿ @ ಅಜ್ಜು ಎಂಬಾತನು ಇತ್ತೀಚೆಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಅ.ಕ್ರ: 04/2026 ಕಲಂ 8C, 21(b),NDPS Act 1985 ರ ಪ್ರಕರಣದ ಆರೋಪಿಯಾಗಿದ್ದಾನೆ. ಅಜ್ಮಲ್‍ ಸಹಚರನಾದ ಇಸ್ಮಾಯಿಲ್‌ನ ಮೇಲೆ ಕೂಡ ಕೇರಳ ರಾಜ್ಯದ ಕೋಝಿಕೋಡು ಜಿಲ್ಲೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular