ಅಬುಧಾಬಿ : ಇರಾನ್-ಅಮೆರಿಕ ಯುದ್ಧದಿಂದಾಗಿ ರದ್ದಾಗಿದ್ದ ವಿಮಾನಯಾನ ಸೇವೆ ಸೋಮವಾರದಿಂದ ಭಾಗಶಃ ಆರಂಭವಾಗಿದ್ದು, ಸಾಕಷ್ಟು ಕನ್ನಡಿಗರು ತಾಯ್ನಾಡಿಗೆ ಮರಳಿದ್ದಾರೆ. ಅಬುಧಾಬಿಯಿಂದ ಬೆಂಗಳೂರಿಗೆ ಬಂದ ೨ ವಿಮಾನಗಳಲ್ಲಿ ಹಂತ ಹಂತವಾಗಿ 700 ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟಿçÃಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಸೋಮವಾರ ರಾತ್ರಿ 10 ಗಂಟೆ ಹೊತ್ತಿಗೆ ಅಬುಧಾಬಿಯಿಂದ ಬಂದ ವಿಮಾನದಲ್ಲಿ 210 ಪ್ರಯಾಣಿಕರು ಸೇಫಾಗಿ ಲ್ಯಾಂಡ್ ಆಗಿದ್ದರು. ಮಂಗಳವಾರ ಬೆಳಗಿನ ಜಾವ 3:2೦ಕ್ಕೆ ಅಬುಧಾಬಿಯಿಂದ ಬಂದ ವಿಮಾನದಲ್ಲಿ 3೦೦ಕ್ಕೂ ಹೆಚ್ಚು ಕನ್ನಡಿಗರು ತಾಯ್ನಾಡಿಗೆ ಮರಳಿ ನಿಟ್ಟುಸಿರು ಬಿಟ್ಟಿದ್ದಾರೆ. ಅಲ್ಲದೇ ದುಬೈನಲ್ಲಿ ಸಿಲುಕಿದ್ದ ಒಲಿಂಪಿಕ್ಸ್ ಪದಕ ವಿಜೇತೆ, ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಕೂಡ ದುಬೈನಿಂದ ಬೆAಗಳೂರಿಗೆ ಸುರಕ್ಷಿತವಾಗಿ ಮರಳಿದ್ದಾರೆ.
ಯುದ್ಧದಿಂದ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆನಿರ್ಮಾಣವಾಗಿತ್ತು. ಹೀಗಾಗಿ ದುಬೈ, ಅಬುಧಾಬಿ, ರಿಯಾದ್, ಮತ್ತಿತರ ನಗರಗಳವಾಯುಪ್ರದೇಶಗಳನ್ನ ನಿರ್ಬಂಧಿಸಲಾಗಿತ್ತು. ಈ ಕಾರಣದಿಂದಾಗಿ ಶನಿವಾರದಿಂದಮಧ್ಯಪ್ರಾಚ್ಯದಿAದ ಬೆಂಗಳೂರಿಗೆಬರಬೇಕಿದ್ದ ವಿಮಾನಗಳ ಹಾರಾಟವನ್ನಸ್ಥಗಿತಗೊಳಿಸಲಾಗಿತ್ತು.
ಇರಾನ್-ಅಮೆರಿಕ ಯುದ್ಧದಿಂದಾಗಿ ರದ್ದಾಗಿದ್ದವಿಮಾನಯಾನ ಸೇವೆ ಸೋಮವಾರದಿಂದ ಭಾಗಶಃ ಆರಂಭವಾಗಿದ್ದು, ಸಾಕಷ್ಟುಕನ್ನಡಿಗರು ತಾಯ್ನಾಡಿಗೆ ಮರಳಿದ್ದಾರೆ.ಅಬುಧಾಬಿಯಿಂದ ಬೆಂಗಳೂರಿಗೆ ಬಂದ೨ ವಿಮಾನಗಳಲ್ಲಿ ಹಂತ ಹಂತವಾಗಿ 800 ಕ್ಕೂಹೆಚ್ಚು ಕನ್ನಡಿಗರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟಿçÃಯ ವಿಮಾನ ನಿಲ್ದಾಣಕ್ಕೆಬಂದಿಳಿದಿದ್ದಾರೆ.


