ಶಿರಸಿ : ಶಿರಸಿ-ಯಲ್ಲಾಪುರ ರಸ್ತೆಯ ಬೇಡ್ತಿ ಸಮೀಪದ ಮಳಲಗಾವ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ನಡೆದ ಅಪಘಾತದಲ್ಲಿ ಕಾರ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನಲ್ಲಿ ನೆಲೆಸಿದ್ದ ಕುಂದಾಪುರ ನಿವಾಸಿ ಮುಕೇಶ್ ಶೆಟ್ಟಿ ಸಾವನಪ್ಪಿದ ಘಟನೆ ವರದಿಯಾಗಿದೆ.
ಮಂಗಳೂರಿನಲ್ಲಿ ಮ್ಯಾಕ್ಸ್ ಇನ್ಫೋಟೆಸ್ ಹಾಗೂ ಇನ್ನಿತರ ಸಂಸ್ಥೆಯನ್ನು ನಡೆಸುತ್ತಿದ್ದ ಮುಕೇಶ್ ಶೆಟ್ಟಿ ಸಿರಸಿ ಕಡೆದೆ ಕೆಲಸದ ನಿಮಿತ್ತ ಪ್ರಯಾಣಿಸುತ್ತಿದ್ದರು.ಕೆ.ಎಸ್.ಆರ್.ಟಿ .ಸಿ ಬಸ್ ಸಿದ್ದಾಪುರದಿಂದ ಬೆಳಗಾವಿ ಮದುವೆ ಕಾರ್ಯಕ್ರಮಕ್ಕಾಗಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಒಪ್ಪಂದದ ಮೇರೆ ಬಸ್ ಎಂದು ತಿಳಿದಿದ್ದು , ಈ ವೇಳೆ ಕೆಎಸ್‌ಆರ್‌ಟಿಸಿ ಬಸ್ ಮತ್ತು ಎದುರಿನಿಂದ ಬರುತ್ತಿದ್ದ ಕಾರಿನ ನಡುವೆ ಮಳಲಗಾವ್ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂಬ ಮಾಹಿತಿ ದೊರೆತಿದೆ.
ಅಪಘಾತದ ಪರಿಣಾಮ ಕಾರು ಚಾಲಕ ಮುಕೇಶ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣವೇ ಅತನಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ.ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸವನಪ್ಪಿದ್ದಾರೆಂದು ತಿಳಿದುಬಂದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಹಾಗೂ ಮದುವೆಗೆ ತೆರಳುತ್ತಿದ್ದ ಪ್ರಯಾಣಿಕರಿಗೆ ತೊಂದರೆ ಆಗದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಕ್ಷಣವೇ ಬದಲಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.


