Monday, March 16, 2026
Flats for sale
Homeಜಿಲ್ಲೆಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟ,ಸಮಾಜ ಕಲ್ಯಾಣ ಯೋಜನೆಯಡಿ ಸಹಾಯಧನ ವಿತರಣೆ.

ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟ,ಸಮಾಜ ಕಲ್ಯಾಣ ಯೋಜನೆಯಡಿ ಸಹಾಯಧನ ವಿತರಣೆ.

ಮಂಗಳೂರು : ಬಂಟ್ಸ್ ಹಾಸ್ಟೆಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ದತ್ತು ಸ್ವೀಕರಿಸಿ ಮಾಸಿಕ ಧನಸಹಾಯ ನೀಡುತ್ತಾ ಬಂದಿರುವ ಪಲಾನುಭವಿಗಳಿಗೆ ಸಹಾಯಧನ ಚೆಕ್ ವಿತರಣಾ ಕಾರ್ಯಕ್ರಮವು ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಒಕ್ಕೂಟದ ಸಂಚಾಲಕರಾದ ಕೊಲ್ಲಾಡಿ ಬಾಲಕೃಷ್ಣ ರೈ, ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು, ಪಲಾನುಭವಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular