Thursday, April 2, 2026
Flats for sale
Homeರಾಜ್ಯಬೆಂಗಳೂರು : ರಾಜ್ಯದಲ್ಲಿ ಹೆಚ್ಚಿದ ಬಾಲಗರ್ಭಿಣಿಯರ ಸಂಖ್ಯೆ,ಬೆಂಗಳೂರು ನಗರವೇ ಮುಂದು, ಆತಂಕಕಾರಿ ಸಂಗತಿ ಬೆಳಕಿಗೆ..!

ಬೆಂಗಳೂರು : ರಾಜ್ಯದಲ್ಲಿ ಹೆಚ್ಚಿದ ಬಾಲಗರ್ಭಿಣಿಯರ ಸಂಖ್ಯೆ,ಬೆಂಗಳೂರು ನಗರವೇ ಮುಂದು, ಆತಂಕಕಾರಿ ಸಂಗತಿ ಬೆಳಕಿಗೆ..!

ಬೆಂಗಳೂರು : ರಾಜ್ಯದಲ್ಲಿ ಪ್ರಸ್ತುತ 14 ರಿಂದ 18 ವರ್ಷದೊಳಗಿನ ಬಾಲಗರ್ಭಿಣಿಯರ ಸಂಖ್ಯೆ 5975 ಇದೆ ಎಂಬ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ. ವಿಶೇಷವೆAದರೆ, ಬಾಲಗರ್ಭಿಣಿಯರ ಸಂಖ್ಯೆಯಲ್ಲಿ ರಾಜಧಾನಿ ಬೆಂಗಳೂರು ನಗರವೇ ಮುಂದಿದೆ. ರಾಯಚೂರು, ವಿಜಯಪುರ, ತುಮಕೂರು, ಬಳ್ಳಾರಿಯಲ್ಲಿಯೂ ಅತ್ಯಧಿಕ ಪ್ರಕರಣಗಳಿವೆ. ಬಾಲ್ಯವಿವಾಹದ ವಿರುದ್ಧ ಕ್ರಮ ಕೈಗೊಳ್ಳಲು ಕಾಯ್ದೆಯಡಿ ಅವಕಾಶವಿದೆಯೇ ಹೊರತು, ಬಾಲ್ಯವಿವಾಹದ ಪ್ರಯತ್ನ ಅಥವಾ ನಿಶ್ಚಿತಾರ್ಥದ ಬಗ್ಗೆ ಕ್ರಮ ಕೈಗೊಳ್ಳಲು ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ರಲ್ಲಿ ಅವಕಾಶ ಇಲ್ಲ. ಹೀಗಾಗಿ ದೂರನ್ನು ದಾಖಲಿಸಲು ಸಾಧ್ಯವಾಗುತ್ತಿಲ್ಲ. ಇದೂ ಕೂಡ ಬಾಲಗರ್ಭಿಣಿಯರ ಸಂಖ್ಯೆ ಏರಲ ಕಾರಣ ಎನ್ನಲಾಗುತ್ತಿದೆ.

ರಾಜ್ಯದ ಎಲ್ಲಾ ಶಾಲಾ-ಕಾಲೇಜು, ವಸತಿ ನಿಲಯ ಹಾಗೂ ತರಬೇತಿ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು, ಬಾಲಗರ್ಭಿಣಿಯರ ಬಗ್ಗೆ ಮಾಹಿತಿ ಪಡೆಯುವುದು, ಪೊಕ್ಸೋ ಪ್ರಕರಣ, ಬಾಲ್ಯವಿವಾಹ ಹಾಗೂ ಮಕ್ಕಳ ಸಹಾಯವಾಣಿ-1098 ರ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಸರ್ಕಾರ 7 ಇಲಾಖೆಗಳಿಂದ ಸುತ್ತೋಲೆಯನ್ನು ಹೊರಡಿಸಿದೆ.

ಮಹಿಳೆಯರು ಅನೈತಿಕ ಚಟುವಟಿಕೆಗಳಲ್ಲಿ ತೊಡಗುವುದನ್ನು ತಡೆಯಲು ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟಲು, ಬಾಲ್ಯವಿವಾಹಗಳನ್ನು ತಡೆಯಲು ಹಾಗೂ ಸಮಗ್ರ ಮಕ್ಕಳ ರಕ್ಷಣೆಗಾಗಿ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಈಗಾಗಲೇ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ರಚಿಸಲಾಗಿದೆ. ಅದೇ ರೀತಿಯಲ್ಲಿ ನಗರ ಮತ್ತು ಪಟ್ಟಣಗಳ ಸ್ಥಳೀಯ ಸಂಸ್ಥೆಗಳಲ್ಲಿ ಕೂಡ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯನ್ನು ರಚಿಸಲಾಗುತ್ತಿದೆ. ರಾಜ್ಯದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರು ಗರ್ಭಿಣಿ ಆಗುವುದನ್ನು ತಡೆಗಟ್ಟಲು ಎಲ್ಲಾ ಭಾಗೀದಾರ ಇಲಾಖೆಗಳ ಅಧಿಕಾರಿಗಳಿಗೆ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಹಂತಗಳಲ್ಲಿ ಸಾಮರ್ಥ್ಯಾಭಿವೃದ್ಧಿ ತರಬೇತಿ ನೀಡಲು ಯೋಜಿಸಲಾಗುತ್ತಿದೆ.

ಮಕ್ಕಳ ಸಹಾಯವಾಣಿ-1098 ದಿನದ 25 ತಾಸು ಕಾರ್ಯನಿರ್ವಹಿಸುತ್ತಿದೆ. ಸಂಕಷ್ಟದಲ್ಲಿರುವ ಮಗುವಿನ ಬಗ್ಗೆ ಯಾವುದೇ ಸಮಯದಲ್ಲಿ ಕರೆ ಸ್ವೀಕೃತವಾದರೂ ಮಗುವನ್ನು ರಕ್ಷಿಸಲು ಸಂಬAಧಿಸಿದ ಅಧಿಕಾರಿಗಳು ಪ್ರವೃತ್ತರಾ ಗಿರುತ್ತಾರೆ. ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳು ಗರ್ಭಿಣಿಯರಾಗುವುದನ್ನು ತಡೆಯುವ ಜವಾಬ್ದಾರಿಯನ್ನು ಇಲಾಖೆಗಳಿಗೆ ನಿಗದಿಪಡಿಸಲಾಗಿದೆ. ಸಮಸ್ಯೆ ತಡೆಗಟ್ಟಲು ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಕಾವಲು ಸಮಿತಿಯನ್ನು ರಚಿಸಲಾಗಿದೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ರಚಿಸಲಾಗಿದ್ದು, ಈ ಪ್ರಕರಣಗಳ ಕುರಿತು ಪ್ರತಿ ತ್ರೈಮಾಸಿಕದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಆಕಾಶವಾಣಿಯಲ್ಲಿ ಸರಣಿ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗಿದೆ. ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನಾ ಅಡಿಯಲ್ಲಿ ವರ್ಷಕ್ಕೆ 5 ಲಕ್ಷ ರೂ. ಗಳ ಆರೋಗ್ಯ ವಿಮೆಯನ್ನು ಸಂತ್ರಸ್ಥೆಗೆ ಮತ್ತು ಅವಳ ನವಜಾತ ಶಿಶುವಿಗೆ ನೀಡಲಾಗುವುದು. ಬಾಲ್ಯವಿವಾಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಯಾ ತಾಲ್ಲೂಕು ತಹಶೀಲ್ದಾರ್‌ರನ್ನು ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿ ಸರ್ಕಾರವು ನೇಮಿಸಿದೆ

RELATED ARTICLES

LEAVE A REPLY

Please enter your comment!
Please enter your name here

Most Popular