Saturday, August 8, 2026
Homeದೇಶಪಾಟ್ನಾ : ಬಿಹಾರ ರಾಜಕಾರಣದಲ್ಲಿ ಮಹತ್ತರ ಬದಲಾವಣೆ, ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ,ನಾಳೆ...

ಪಾಟ್ನಾ : ಬಿಹಾರ ರಾಜಕಾರಣದಲ್ಲಿ ಮಹತ್ತರ ಬದಲಾವಣೆ, ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ,ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ.

ಪಾಟ್ನಾ ; ಬಿಹಾರ ರಾಜ್ಯ ರಾಜಕೀಯದಲ್ಲಿ ಇಂದು ಮಹತ್ತರ ತಿರುವು ಸಂಭವಿಸಿದ್ದು, ಸುಮಾರು ಎರಡು ದಶಕಗಳ ಕಾಲ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದ ನಿತೀಶ್ ಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯೊಂದಿಗೆ ಹೊಸ ಮುಖ್ಯಮಂತ್ರಿ ಆಯ್ಕೆ ಕುರಿತ ಕುತೂಹಲಕ್ಕೂ ತೆರೆ ಬಿದ್ದಿದೆ.

ಹೊಸ ಮುಖ್ಯಮಂತ್ರಿ ಆಯ್ಕೆ ; ಎನ್‌ಡಿಎ (NDA) ಮೈತ್ರಿಕೂಟದ ಸಭೆಯಲ್ಲಿ ಸಾಮ್ರಾಟ್ ಚೌಧರಿ ಅವರನ್ನು ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಅವರು ಏಪ್ರಿಲ್ 15ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಾಟ್ನಾದ ವಿಧಾನಸಭಾ ಕೇಂದ್ರ ಸಭಾಂಗಣದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಗಳು ಮತ್ತು ನಿರ್ಧಾರ ಪ್ರಕ್ರಿಯೆ.

ಮಧ್ಯಾಹ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತುಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ವೀಕ್ಷಕರಾಗಿ ಭಾಗವಹಿಸಿದರು ನಂತರ ಎನ್‌ಡಿಎ ಮೈತ್ರಿಕೂಟ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಯಿತು

ನಿತೀಶ್ ಕುಮಾರ್ ಮುಂದಿನ ಹೆಜ್ಜೆ.

ಮಾರ್ಚ್ 30ರಂದು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಏಪ್ರಿಲ್ 11ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಈಗ ದೆಹಲಿಯಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗುವ ಸಾಧ್ಯತೆ.

ಸಿಎಂ ರೇಸ್‌ನಲ್ಲಿ ಇದ್ದ ಪ್ರಮುಖರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದವು ನಿತ್ಯಾನಂದ ರೈ ವಿಜಯ್ ಕುಮಾರ್ ಸಿನ್ಹಾ ನಿತೀಶ್ ಮಿಶ್ರಾ ದಿಲೀಪ್ ಜೈಸ್ವಾಲ್ ಆದರೆ ಅಂತಿಮವಾಗಿ ಸಾಮ್ರಾಟ್ ಚೌಧರಿ ಹೆಸರು ಘೋಷಿಸಲಾಯಿತು.

ರಾಜಕೀಯ ಅರ್ಥ ; ವಿಧಾನಸಭೆಯಲ್ಲಿ ಅತಿದೊಡ್ಡ ಪಕ್ಷವಾಗಿರುವ ಕಾರಣ ಬಿಜೆಪಿ ಈ ಬಾರಿ ಸರ್ಕಾರದ ನೇತೃತ್ವ ವಹಿಸಿಕೊಳ್ಳಲಿದ್ದು, ಬಿಹಾರ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular