Friday, July 31, 2026
Homeರಾಜಕೀಯಬೆಂಗಳೂರು : ಇನ್ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ : ವಿಧೇಯಕಕ್ಕೆ...

ಬೆಂಗಳೂರು : ಇನ್ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ : ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಅಂಕಿತ .

ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಯಂತ್ರಗಳ ಬದಲಿಗೆ ಮತ ಪತ್ರವನ್ನು ಬಳಸಲು ಅನುವು ಮಾಡುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಅಂಕಿತ ಹಾಕಿದ್ದು ಕಾಯ್ದೆ ಜಾರಿಗೊಳಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಮತಯಂತ್ರದ ಪಾರದರ್ಶಕತೆ, ವಿಶ್ವಾಸಾರ್ಹತೆ ಸಂಬAಧ ತೀವ್ರ ಅನುಮಾನ ವ್ಯಕ್ತಪಡಿಸುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಪವೋಟ್ ಚೋರಿ ಬಗ್ಗೆ ಹೋರಾಟ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ ಯಂತ್ರಗಳ ಬದಲಿಗೆ ಮತಪತ್ರ ಹಾಗೂ ಮತಪೆಟ್ಟಿಗೆ
ಬಳಸಲು ತೀರ್ಮಾನಿಸಿದೆ.

ಈ ಹಿನ್ನೆಲೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ ಜಾರಿಗೆ ಬಂದಿದೆ.ಹಾಗಾಗಿ ಇನ್ನು ಮುಂದೆ ಗ್ರಾಪಂ, ತಾಪA, ಜಿಪಂ, ನಗರ ಪಾಲಿಕೆಗಳು ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತಪತ್ರದ ಮೂಲಕನೇ ನಡೆಯಲಿದೆ. ಮತಯಂತ್ರದ ಬದಲು ಮತಪತ್ರ ಬಳಸಲಾಗುವುದು. ಈ ಕಾಯ್ದೆಯಲ್ಲಿ ಮತದಾರ ಮೇಲಿನ ದಬ್ಬಾಳಿಕೆ, ಬೆದರಿಕೆ ಹಾಗೂ ಅನಗತ್ಯ ಪ್ರಭಾವ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವ ಅಂಶವನ್ನು ಸೇರ್ಪಡೆಗೊಳಿಸಲಾಗಿದೆ. ಇವಿಎಂ ಕಾರ್ಯನಿರ್ವಹಣೆಯ ಕುರಿತು ಕಳವಳ ವ್ಯಕ್ತವಾಗಿದ್ದು, ಸಾರ್ವಜನಿಕ ನಂಬಿಕೆಯನ್ನು ಮರುಸ್ಥಾಪಿಸಲು ಸದೃಢ ರಹಸ್ಯ ಮತದಾನ ಪದ್ಧತಿಗೆ ಮರಳುವುದು ಅವಶ್ಯಕ ಎಂಬ ಉದ್ದೇಶದಿಂದ ಈ ಹೊಸ ಕಾಯ್ದೆ ರೂಪಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular