ಬೆಂಗಳೂರು : ಸಿಇಟಿ ಪರೀಕ್ಷೆ ವೇಳೆ ಮಡಿವಾಳದ ಕೃಪಾನಿಧಿ ಕಾಲೇಜಿನಲ್ಲಿ ಉದ್ದೇಶ ಪೂರ್ವಕವಾಗಿಯೇ ವಿದ್ಯಾರ್ಥಿಯ ಜನಿವಾರ ತೆಗೆಯಿಸಲಾಗಿದೆ ಎಂಬುದು ತನಿಖಾ ವರದಿಯಿಂದ ತಿಳಿದು ಬಂದಿದ್ದು ಇನ್ನು ಮುಂದೆ ಈ ಕಾಲೇಜಿನಲ್ಲಿ ಯಾವುದೇ ಸರ್ಕಾರದ ಪರೀಕ್ಷೆ ನಡೆಸದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿಫಾರಸು ಮಾಡಿದ್ದಾರೆ. ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಧಾರ್ಮಿಕ ಸ್ವಾತಂತ್ರ÷್ಯದ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಬ್ರಾಹ್ಮಣ ಮಹಾಸಭಾ ಕೂಡಲೇ ಕಾಲೇಜು ಪರವಾನಗಿ ರದ್ದುಪಡಿಸುವಂತೆ ಆಗ್ರಹಿಸಿತು.
ಇದೇ ವೇಳೆ ಕೃಪಾನಿಧಿ ಕಾಲೇಜಿನ ಪ್ರಕರಣದ ಕುರಿತು ವರದಿ ನೀಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೋರಿತ್ತು. ಈ ಹಿನ್ನೆಲೆಯಲ್ಲಿ ಕೃಪಾನಿಧಿ ಕಾಲೇಜಿನಲ್ಲಿ ನಡೆದ ಘಟನೆ ಕುರಿತಂತೆ ಜಿಲ್ಲಾಧಿಕಾರಿಗಳು ಪರಿಶೀಲನೆ ಮಾಡಿದ್ದು, ಈ ಕಾಲೇಜಿನಲ್ಲಿ ಇನ್ನು ಮುಂದೆ ಯಾವುದೇ ಸರ್ಕಾರಿ ಪರೀಕ್ಷೆ ನಡೆಸದಂತೆ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಹೇಳಿದ್ದಾರೆ.
ತನಿಖೆಗೆ ಆದೇಶಿಸಿದ್ದ ಕೆಇಎ: ೨೦೨೬ನೇ ಸಾಲಿನ ಸಿಇಟಿ ಪರೀಕ್ಷೆ ವೇಳೆ ಬೆಂಗಳೂರು ಕೇಂದ್ರದಲ್ಲಿ ಏಪ್ರಿಲ್ 23ರ ಭೌತಶಾಸ್ತç ವಿಷಯದ ಪರೀಕ್ಷೆಗೆ ಹಾಜರಾಗಲು ಬಂದಿದ್ದ ಕೆಲವು ಅಭ್ಯರ್ಥಿಗಳ ಜನಿವಾರವನ್ನು ತೆಗೆಸಲು ಅಲ್ಲಿಯ ಸಿಬ್ಬಂದಿ ಸೂಚಿಸಿರುತ್ತಾರೆAದು, ನಂತರ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಿರುತ್ತಾರೆ ಎಂದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತç ಸಂಹಿತೆಯ ಬಗ್ಗೆ ವಿವರಿಸಿದೆ. ಕಳೆದ ವರ್ಷದಲ್ಲಿ ನಡೆದ ಇದೇ ತರಹದ ಘಟನೆ ಉಲ್ಲೇಖಿಸಿ ಜನಿವಾರ, ಲಿಂಗ ಇತ್ಯಾದಿ ಧಾರ್ಮಿಕ ದಿರಿಸುಗಳನ್ನು ತೆಗೆಯಬಾರದೆಂದು ಸ್ಪಷ್ಟವಾಗಿ ತರಬೇತಿಯಲ್ಲಿ ತಿಳಿಸಲಾಗಿದೆ. ಆದರೂ ಇಂತಹ ಘಟನೆ ನಡೆದಿದ್ದರೆ ಯಾರೋ ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ. ಹೀಗಾಗಿ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವಿಚಾರಣೆ ನಡೆಸಿ ನಿಯಮಾನುಸಾರ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಪೂರ್ಣ ವರದಿ ಸಲ್ಲಿಸುವಂತೆ ಬೆಂಗಳೂರು ನಗರ ಡಿಸಿಗೆ ಪತ್ರ ಬರೆದು ಕೆಇಎ ಕೋರಿತ್ತು.
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರ ಸಂಬAಧ ಕೃತ್ಯ ಎಸಗಿರೋದು ಯಾರು ಎಂಬ ಬಗ್ಗೆ ತನಿಖೆ ಮಾಡಲಾಗಿದೆ. ವಸ್ತçಸಂಹಿತೆ ಬಗ್ಗೆ ತರಬೇತಿ ನೀಡಿದ್ದರೂ ಇಷ್ಟೆಲ್ಲ ಸಮಸ್ಯೆಯಾಗಿದೆ. ಕರ್ತವ್ಯ ಲೋಪವಾಗಿರುವ ಕಾರಣ ಕೃಪಾನಿಧಿ ಕಾಲೇಜಿನಲ್ಲಿ ಮುಂದೆ ಯಾವುದೇ ರೀತಿಯ ಸರ್ಕಾರಿ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡದಂತೆ ವರದಿಯಲ್ಲಿ ತಿಳಿಸಲಾಗುವುದು ಎಂದು ಡೀಸಿ ಹೇಳಿದ್ದಾರೆ. ಹಾಗಾಗಿ ಇನ್ನುಮುಂದೆ ಇಲ್ಲಿ ಸರ್ಕಾರಿ ಪರೀಕ್ಷೆಗಳು ನಡೆಯುವುದು ಸಂದೇಹ ಎನ್ನಲಾಗುತ್ತಿದೆ.


