Saturday, July 18, 2026
Homeರಾಜ್ಯಬೆಂಗಳೂರು : ದ.ಕ,ಉಡುಪಿ ಸೇರಿ 25 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ, 5 ದಿನ ಯೆಲ್ಲೋ...

ಬೆಂಗಳೂರು : ದ.ಕ,ಉಡುಪಿ ಸೇರಿ 25 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ, 5 ದಿನ ಯೆಲ್ಲೋ ಅಲರ್ಟ್ ಘೋಷಣೆ.

ಬೆಂಗಳೂರು : ರಾಜ್ಯದಲ್ಲಿ ತೀವ್ರ ಬೇಸಿಗೆ ನಡುವೆಯೇ ಮುಂಗಾರು ಪೂರ್ವ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ತಂಪಿನ ಜೊತೆಗೆ ಆತಂಕವನ್ನೂ ಉಂಟುಮಾಡಿದೆ. Indian Meteorological Department (IMD) ದಕ್ಷಿಣ ಕನ್ನಡ ಮತ್ತು Udupi ಸೇರಿದಂತೆ 25 ಜಿಲ್ಲೆಗಳಿಗೆ ಮುಂದಿನ ಐದು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ ದಿನಗಳಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ಕರಾವಳಿ ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸುರಿಯುವ ನಿರೀಕ್ಷೆಯಿದೆ. ಕಳೆದ 32 ಗಂಟೆಗಳಲ್ಲಿ Hassan ಜಿಲ್ಲೆಯಲ್ಲಿ 61.5 ಮಿಮೀ ಮಳೆಯಾಗಿ ಅತಿ ಹೆಚ್ಚು ದಾಖಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಮಳೆಯಾಗಿದೆ.

ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಸಂಜೆ ವೇಳೆ ಗುಡುಗು-ಮಿಂಚು ಸಹಿತ ಮಳೆಯ ಸಾಧ್ಯತೆ ಗಾಳಿ ಒತ್ತಡದಿಂದ ಮಳೆ ಚದುರಿದೆ. ಮಲೆನಾಡು ಪ್ರದೇಶ ಕೊಡಗು ಜಿಲ್ಲೆಯಲ್ಲಿ ಸಾಮಾನ್ಯ ಸಂಜೆ ಮಳೆಯಾಗಲಿದೆ.ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ನಿರೀಕ್ಷೆ ಕಂಡುಬಂದಿದೆ. ಉತ್ತರ ಒಳನಾಡು ಪ್ರದೇಶಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ ಜಿಲ್ಲೆಗಳಲ್ಲಿ ಸಂಜೆ/ರಾತ್ರಿ ಮಳೆ ಇತರೆ ಭಾಗಗಳಲ್ಲೂ ಮಳೆಯ ಸಾಧ್ಯತೆವಿದೆ.

ಏ. 29 ರಂದು 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಏ. 30 : 24 ಜಿಲ್ಲೆಗಳಲ್ಲಿ ಮುಂದುವರಿಯಲಿದೆ ,ಮೇ 1 ರಂದು 19 ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಬೆಂಗಳೂರು ನಗರದ ಹಲವೆಡೆ ಬಾರಿ ಮಳೆ ದಾಖಲಾಗಿದ್ದು ಮುಂದಿನ 4 ದಿನಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗುಡುಗು-ಮಿಂಚಿನ ವೇಳೆ ಹೊರಗೆ ನಿಲ್ಲಬೇಡಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ವಾಹನ ಸವಾರರು ಜಾಗರೂಕರಾಗಿರಬೇಕು ಎಂದು ಸೂಚನೆ ನೀಡಿದ್ದಾರೆ. ಒಟ್ಟಿನಲ್ಲಿ, ಮೇ ಮೊದಲ ವಾರದಿಂದ ರಾಜ್ಯದಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದ್ದು, ಮುಂಗಾರು ಹತ್ತಿರವಾಗುತ್ತಿರುವ ಸೂಚನೆ ಕಂಡುಬರುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular