Saturday, July 18, 2026
Homeರಾಜಕೀಯಬೆಂಗಳೂರು : ಅಲ್ಪಸಂಖ್ಯಾತರ ಕಾಲನಿಗಳಿಗೆ ₹600 ಕೋಟಿ ಯೋಜನೆಗೆ ಸಂಪುಟ ಒಪ್ಪಿಗೆ ಸಾಧ್ಯ.

ಬೆಂಗಳೂರು : ಅಲ್ಪಸಂಖ್ಯಾತರ ಕಾಲನಿಗಳಿಗೆ ₹600 ಕೋಟಿ ಯೋಜನೆಗೆ ಸಂಪುಟ ಒಪ್ಪಿಗೆ ಸಾಧ್ಯ.

ಬೆಂಗಳೂರು : ರಾಜ್ಯದಲ್ಲಿ ಅಲ್ಪಸಂಖ್ಯಾತರು ವಾಸಿಸುವ ಕಾಲನಿಗಳ ಅಭಿವೃದ್ಧಿಗಾಗಿ ₹600 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಗುರುವಾರ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಗುವ ನಿರೀಕ್ಷೆ ಇದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ, ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರ ಕಾಲನಿಗಳ ಅಭಿವೃದ್ಧಿಗೆ 2026–27 ಮತ್ತು 2027–28 ಸಾಲಿನಲ್ಲಿ ₹600 ಕೋಟಿ ವೆಚ್ಚ ಮಾಡುವ ಗುರಿ ಹೊಂದಲಾಗಿದೆ. ಈ ಹಿಂದೆ 2023ರಲ್ಲಿ ಘೋಷಿಸಲಾಗಿದ್ದ ₹1,000 ಕೋಟಿ ಅನುದಾನ ಬಹುತೇಕ ಬಳಸಲ್ಪಟ್ಟ ಹಿನ್ನೆಲೆಯಲ್ಲಿ ಹೊಸ ಯೋಜನೆಗೆ ಸರ್ಕಾರ ಮುಂದಾಗಿದೆ.

ಇದರ ಜೊತೆಗೆ, ಬ್ಯಾಂಗಲೋರ್ ಡೆವಲಪ್ಮೆಂಟ್ ಅಥಾರಿಟಿ ವತಿಯಿಂದ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ 9 ಗ್ರಾಮಗಳ 7,482 ಎಕರೆ ಪ್ರದೇಶದಲ್ಲಿ ₹18,133 ಕೋಟಿ ವೆಚ್ಚದ ಗ್ರೇಟರ್ ಬೆಂಗಳೂರು ಉಪನಗರ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರದ ಪ್ರಾಯೋಜಿತ ಹೈದರಾಬಾದ್–ಬೆಂಗಳೂರು ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗೆ ತಾತ್ವಿಕ ಅನುಮೋದನೆ ನೀಡುವ ವಿಚಾರವೂ ಸಂಪುಟದಲ್ಲಿ ಚರ್ಚೆಯಾಗಲಿದೆ.

ಇದೇ ವೇಳೆ, ಬೆಂಗಳೂರು–ಬೀದರ್–ಬೆಂಗಳೂರು ಹಾಗೂ ಬೆಂಗಳೂರು–ಕಲಬುರಗಿ–ಬೆಂಗಳೂರು ಮಾರ್ಗಗಳಲ್ಲಿ ವಿಮಾನ ಸೇವೆಗಾಗಿ ವಾರ್ಷಿಕ ₹28.47 ಕೋಟಿ ಪ್ರೋತ್ಸಾಹಧನ ರಾಜ್ಯದ 6 ಜಿಲ್ಲಾ ಆಸ್ಪತ್ರೆಗಳಿಗೆ ₹81 ಕೋಟಿ ವೆಚ್ಚದಲ್ಲಿ MRI ಯಂತ್ರಗಳ ಖರೀದಿ,ಇವುಗಳಿಗೂ ಸಂಪುಟ ಸಭೆಯಲ್ಲಿ ಅನುಮೋದನೆ ಸಿಗುವ ನಿರೀಕ್ಷೆ ಇದೆ.

RELATED ARTICLES

LEAVE A REPLY

Please enter your comment!
Please enter your name here

Most Popular