Saturday, July 18, 2026
Homeರಾಜ್ಯಮೈಸೂರು : ಪ್ರೀತಿಯ ಹೆಸರಿನಲ್ಲಿ ಮೋಸ ಆರೋಪ : ಮುಖ್ಯಮಂತ್ರಿ ಸಿದ್ದರಾಮಯ್ಯರವರ ಆಪ್ತ ಮಾಜಿ ಪುರಸಭೆ...

ಮೈಸೂರು : ಪ್ರೀತಿಯ ಹೆಸರಿನಲ್ಲಿ ಮೋಸ ಆರೋಪ : ಮುಖ್ಯಮಂತ್ರಿ ಸಿದ್ದರಾಮಯ್ಯರವರ ಆಪ್ತ ಮಾಜಿ ಪುರಸಭೆ ಅಧ್ಯಕ್ಷನ ವಿರುದ್ಧ ದೂರು.

ಮೈಸೂರು : ಮೈಸೂರು ಜಿಲ್ಲೆಯ T Narasipura ಪಟ್ಟಣದಲ್ಲಿ ಯುವತಿಗೆ ಪ್ರೀತಿ ಮಾಡುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿದ ಆರೋಪದ ಪ್ರಕರಣ ಬೆಳಕಿಗೆ ಬಂದಿದೆ.

ಮಾಜಿ ಪುರಸಭೆ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಆಪ್ತರಾಗಿ ಗುರುತಿಸಿಕೊಂಡಿರುವ ಮದನ್ ರಾಜ್ ವಿರುದ್ಧ ಯುವತಿ ಆರೋಪ ಮಾಡಿದ್ದಾಳೆ. ತನ್ನನ್ನು ಪ್ರೀತಿಸುತ್ತೇನೆ ಎಂದು ನಂಬಿಸಿ ಬಳಿಕ ದೂರ ಸರಿದು, ಇನ್ನೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.

ಇದೇ ವೇಳೆ, ಇಬ್ಬರೂ ಸೇರಿ ವಿಷ ಸೇವಿಸೋಣ ಎಂದು ನಂಬಿಸಿ ಯುವತಿಗೆ ವಿಷ ಕುಡಿಸಿರುವುದಾಗಿ ಕೂಡ ಆರೋಪಿಸಲಾಗಿದೆ. ಮನನೊಂದ ಯುವತಿ ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಟಿ ನರಸಿಪುರ ಪೋಲಿಸ್ ಠಾಣೆನಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular