ಕಲಬುರಗಿ : ನಗರದಲ್ಲಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಉದ್ದೇಶದಿಂದ ಎಐ ಆಧಾರಿತ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ Dr. ಶರಣಪ್ಪ S D ತಿಳಿಸಿದ್ದಾರೆ.
ನಗರದಲ್ಲಿ ಐಟಿಎಂಎಸ್ (Intelligent Traffic Management System) ತಂತ್ರಜ್ಞಾನ ಆಧಾರಿತ ಸಂಚಾರ ನಿಯಂತ್ರಣ ವ್ಯವಸ್ಥೆ ಜಾರಿಗೊಂಡಿದ್ದು, ನಿಯಮ ಉಲ್ಲಂಘನೆ ಮಾಡಿದರೆ ತಕ್ಷಣ ದಂಡ ವಿಧಿಸಲಾಗುತ್ತದೆ.
ನಗರದಲ್ಲಿ 58 ಸ್ಥಳಗಳಲ್ಲಿ 180 ಸಿಸಿಟಿವಿ ಕ್ಯಾಮರಾಗಳ ಅಳವಡಿಕೆ ಮಾಡಿದ್ದು ಎಐ ಮೂಲಕ ಟ್ರಾಫಿಕ್ ನಿಯಮ ಉಲ್ಲಂಘನೆ ಪತ್ತೆಯಾಗಲಿದೆ. ಬೈಕ್ ಸವಾರರು ಹೆಲ್ಮೆಟ್ ಧರಿಸಬೇಕು ಕಾರು ಚಾಲಕರು ಸೀಟ್ ಬೆಲ್ಟ್ ಹಾಕಬೇಕು ಎಂದು ವಾಹನ ಸವಾರರಿಗೆ ಕಡ್ಡಾಯ ನಿಯಮಗಳನ್ನು ಸೂಚಿಸಲಾಗಿದೆ. ಈ ಹೊಸ ವ್ಯವಸ್ಥೆಯಿಂದ ಸಂಚಾರ ನಿಯಂತ್ರಣ ಸುಧಾರಿಸುವುದರ ಜೊತೆಗೆ ಅಪರಾಧ ತಡೆಗೂ ಸಹಕಾರಿ ಆಗಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ನಿಯಮ ಉಲ್ಲಂಘಿಸಿದರೆ ಈಗ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ – ನಗರದಲ್ಲಿ ಟ್ರಾಫಿಕ್ ರೂಲ್ಸ್ ಇನ್ನಷ್ಟು ಕಠಿಣವಾಗಿದೆ.


