Monday, May 25, 2026
Flats for sale
Homeಜಿಲ್ಲೆಮಂಗಳೂರು : ಮೇ 9–10 ರಂದು ಸುರತ್ಕಲ್ ನ ಗೋವಿಂದದಾಸ ಕಾಲೇಜು ಕ್ರೀಡಾಂಗಣದಲ್ಲಿ ‘ಲೆಜೆಂಡ್ಸ್ ಕ್ರಿಕೆಟ್...

ಮಂಗಳೂರು : ಮೇ 9–10 ರಂದು ಸುರತ್ಕಲ್ ನ ಗೋವಿಂದದಾಸ ಕಾಲೇಜು ಕ್ರೀಡಾಂಗಣದಲ್ಲಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ – ಸೀಸನ್ 5’ ಪಂದ್ಯಾಟ.

ಮಂಗಳೂರು : ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಸೇವಾ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ‘ಓವರ್ ಆರ್ಮ್’ ಕ್ರಿಕೆಟ್ ಪಂದ್ಯಾವಳಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ (ಎಲ್‌ಸಿಎಲ್) – ಸೀಸನ್ 5’ ಮೇ 9 ಮತ್ತು 10ರಂದು ಸುರತ್ಕಲ್‌ನ ಗೋವಿಂದದಾಸ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.

ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಕಿರಣ್ ಆಚಾರ್ಯ ಮಾತನಾಡಿ, ಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿರುವ ಈ ಟೂರ್ನಿ ಹಿರಿಯ ಕ್ರಿಕೆಟಿಗರನ್ನು ಒಗ್ಗೂಡಿಸುವ ‘ಹಿರಿಯರ ಕ್ರಿಕೆಟ್ ಹಬ್ಬ’ವಾಗಿ ರೂಪುಗೊಂಡಿದೆ ಎಂದು ತಿಳಿಸಿದರು.

ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಭರ್ಜರಿ ನಗದು ಬಹುಮಾನ ಹಾಗೂ ಟ್ರೋಫಿಗಳನ್ನು ಘೋಷಿಸಲಾಗಿದೆ. ಪ್ರಥಮ ಬಹುಮಾನವಾಗಿ ₹1,00,005 ಹಾಗೂ ಟ್ರೋಫಿ, ದ್ವಿತೀಯ ಬಹುಮಾನವಾಗಿ ₹50,005 ಹಾಗೂ ಟ್ರೋಫಿ ನೀಡಲಾಗುತ್ತದೆ. ತೃತೀಯ ಮತ್ತು ಚತುರ್ಥ ಸ್ಥಾನಗಳಿಗೆ ಆಕರ್ಷಕ ಟ್ರೋಫಿಗಳು ನೀಡಲಾಗುತ್ತವೆ. ರಾಜ್ಯದ ವಿವಿಧ ಭಾಗಗಳಿಂದ 45 ವರ್ಷ ಮೇಲ್ಪಟ್ಟ ಅನುಭವೀ ಆಟಗಾರರ ತಂಡಗಳು ಭಾಗವಹಿಸಲಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಹಳೆಯ ನೆನಪುಗಳನ್ನು ಮರುಕಳಿಸುವಂತ ಕಾರ್ಯಕ್ರಮವಾಗಲಿದೆ. ಪಂದ್ಯಾವಳಿಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಆಯೋಜಕರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಹಾಗೂ ಸದಸ್ಯ ಪೃಥ್ವಿರಾಜ್ ಶೆಟ್ಟಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular