ಬಾರಾಮತಿ : ಮಹಾರಾಷ್ಟ್ರದ ರಾಜಕೀಯದ ಅತ್ಯಂತ ಪ್ರತಿಷ್ಠಿತ ಕ್ಷೇತ್ರವೆನಿಸಿದ ಬಾರಾಮತಿ ವಿಧಾನಸಭಾ ಉಪಚುನಾವಣೆಯಲ್ಲಿ ಎನ್ಸಿಪಿ ನಾಯಕಿ ಸುನೇತ್ರಾ ಪವಾರ್ ಭರ್ಜರಿ ಗೆಲುವು ಸಾಧಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಸೋಮವಾರ ಪ್ರಕಟವಾದ ಫಲಿತಾಂಶದಲ್ಲಿ ಸುನೇತ್ರಾ ಪವಾರ್ ಸುಮಾರು 2,18,034 ಮತಗಳ ಭಾರೀ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣಾ ಇತಿಹಾಸದಲ್ಲೇ ಅತಿ ಹೆಚ್ಚು ಮತಗಳ ಅಂತರದ ದಾಖಲೆಯನ್ನು ಅವರು ನಿರ್ಮಿಸಿದ್ದಾರೆ.
ಈ ಗೆಲುವನ್ನು ಅವರು ತಮ್ಮ ದಿವಂಗತ ಪತಿ, ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಅರ್ಪಿಸಿದ್ದಾರೆ.
ಚುನಾವಣಾ ಆಯೋಗದ ಅಂಕಿ-ಅಂಶಗಳ ಪ್ರಕಾರ, ಸುನೇತ್ರಾ ಪವಾರ್ ಅವರಿಗೆ ಒಟ್ಟು 2,18,969 ಮತಗಳು ಲಭಿಸಿದ್ದು, ಉಳಿದ 22 ಅಭ್ಯರ್ಥಿಗಳು ಹಾಗೂ NOTA ಸೇರಿ ಒಟ್ಟು ಮತಗಳು 5,000 ದಾಟಿಲ್ಲ ಎಂಬುದು ಗಮನಾರ್ಹ.
ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದಂತೆ ಎಲ್ಲಾ ವಿಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೂ, ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ಗೌರವ ಸೂಚಿಸಿ ಮತದಾರರು ಸುನೇತ್ರಾ ಪವಾರ್ ಪರ ಭಾರೀ ಬೆಂಬಲ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ ರಾಜಕೀಯದಲ್ಲಿ ಈ ಫಲಿತಾಂಶ ಮಹತ್ವದ ತಿರುವು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.


