Monday, May 11, 2026
Flats for sale
Homeಜಿಲ್ಲೆಕಾರ್ಕಳ : ಕೆಸರು,ಮಣ್ಣು ತೆರವು ಕಾರ್ಯದಲ್ಲಿ ತೊಡಗಿದ್ದ ವೇಳೆ ದೇವಸ್ಥಾನದ ಬಾವಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ...

ಕಾರ್ಕಳ : ಕೆಸರು,ಮಣ್ಣು ತೆರವು ಕಾರ್ಯದಲ್ಲಿ ತೊಡಗಿದ್ದ ವೇಳೆ ದೇವಸ್ಥಾನದ ಬಾವಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ರಕ್ಷಣೆ.

ಕಾರ್ಕಳ : ಕುಕ್ಕುಂದೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾವಿಯಲ್ಲಿ ಕೆಸರು ಮತ್ತು ಮಣ್ಣು ತೆರವು ಕಾರ್ಯದಲ್ಲಿ ತೊಡಗಿದ್ದ ಮೂವರು ಕಾರ್ಮಿಕರು ಬಾವಿಯೊಳಗೆ ಸಿಲುಕಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.

ಘಟನೆ ಬೆಳಿಗ್ಗೆ ಸುಮಾರು 10.30ರ ವೇಳೆಗೆ ಬೆಳಕಿಗೆ ಬಂದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಕಾರ್ಕಳ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.

ಬಾವಿಯಲ್ಲಿ ಸಿಲುಕಿದ್ದ ಕಾರ್ಮಿಕರನ್ನು ರಾಜೇಶ್ (42), ಪವನ್ (29) ಮತ್ತು ಗೋಪಾಲ ನಾಯ್ಕ್ (52) ಎಂದು ಗುರುತಿಸಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ಮೂವರನ್ನೂ ಸುರಕ್ಷಿತವಾಗಿ ಬಾವಿಯಿಂದ ಮೇಲಕ್ಕೆತ್ತಿ ರಕ್ಷಣೆ ಮಾಡಿದ್ದಾರೆ. ಬಳಿಕ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿಶಾಮಕ ಠಾಣಾಧಿಕಾರಿ ಅಲ್ಬರ್ಟ್ ಮೊನಿಸ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸಿಬ್ಬಂದಿಗಳಾದ ರೂಪೇಶ್, ಸುರೇಶ್, ದಿನೇಶ್, ಗಣೇಶ್, ನಿತ್ಯಾನಂದ ಹಾಗೂ ಚಾಲಕ ಮುಜಾಮಿಲ್ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular