ಮಂಗಳೂರು ; ತಮಿಳುನಾಡು ವಿಧಾನಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ (VHP) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಸಂಘಟನೆ ಹೊರಡಿಸಿದ ಪ್ರಕಟಣೆಯಲ್ಲಿ, ಸದನದೊಳಗಿನ ಆ ಹೇಳಿಕೆಗಳು ಪ್ರಚೋದನಾತ್ಮಕವಾಗಿದ್ದು ಕೋಟ್ಯಂತರ ಜನರ ಧಾರ್ಮಿಕ ನಂಬಿಕೆಯನ್ನು ಅವಮಾನಿಸುವಂತಿವೆ ಎಂದು ಆರೋಪಿಸಲಾಗಿದೆ. ರಾಜಕೀಯ ಲಾಭಕ್ಕಾಗಿ ಧಾರ್ಮಿಕ ವಿಚಾರಗಳನ್ನು ಗುರಿಯಾಗಿಸುವುದು ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ಧ ಎಂದು VHP ಅಭಿಪ್ರಾಯಪಟ್ಟಿದೆ.
ಸದನದ ಅಧಿಕೃತ ದಾಖಲೆಗಳಿಂದ ಆ ಹೇಳಿಕೆಗಳನ್ನು ತೆಗೆದುಹಾಕುವಂತೆ ತಮಿಳುನಾಡು ಸರ್ಕಾರಕ್ಕೆ ಆಗ್ರಹಿಸಲಾಗಿದೆ. ಸನಾತನ ಧರ್ಮವು ಭಾರತದ ಸಂಸ್ಕೃತಿ ಮತ್ತು ಪರಂಪರೆಯ ಅವಿಭಾಜ್ಯ ಅಂಗವಾಗಿದ್ದು, ಇಂತಹ ಹೇಳಿಕೆಗಳಿಂದ ಅದರ ಮಹತ್ವವನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಈ ಹೇಳಿಕೆಯನ್ನು VHP ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ನೀಡಿದ್ದಾರೆ. ವಿಶ್ವ ಹಿಂದೂ ಪರಿಷತ್ ಈ ವಿಷಯದಲ್ಲಿ ನೀಡಿದ ಪ್ರತಿಕ್ರಿಯೆ ಇದೀಗ ರಾಜಕೀಯ ಮತ್ತು ಸಾಮಾಜಿಕ ವಲಯಗಳಲ್ಲಿ ಚರ್ಚೆಗೆ ಕಾರಣವಾಗಿದೆ.


