ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೈಮರ ಬಳಿ ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.


ಅಪಘಾತದ ರಭಸಕ್ಕೆ ಖಾಸಗಿ ಬಸ್ ಪಲ್ಟಿಯಾಗಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ ಚಾಲಕನ ನಿದ್ರೆ ಮಂಪರಿನಿಂದಲೇ ಅಪಘಾತ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಬಸ್ ಹಾಗೂ ಕಾರಿನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ
ಘಟನೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


