Tuesday, May 19, 2026
Flats for sale
Homeದೇಶನವದೆಹಲಿ : ಎಬೋಲಾ ಆತಂಕ : ಭಾರತದಲ್ಲಿ ಹೈ ಅಲರ್ಟ್ ಘೋಷಣೆ, ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ...

ನವದೆಹಲಿ : ಎಬೋಲಾ ಆತಂಕ : ಭಾರತದಲ್ಲಿ ಹೈ ಅಲರ್ಟ್ ಘೋಷಣೆ, ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ.

ನವದೆಹಲಿ : ಜಾಗತಿಕ ಮಟ್ಟದಲ್ಲಿ ಎಬೋಲಾ ವೈರಸ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆ ಭಾರತ ಸರ್ಕಾರ ದೇಶಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಮಾರಕ ವೈರಸ್ ದೇಶದೊಳಗೆ ಹರಡದಂತೆ ತಡೆಯಲು ಕೇಂದ್ರ ಆರೋಗ್ಯ ಸಚಿವಾಲಯ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದೆ.

ದೇಶದ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ವಿಶೇಷವಾಗಿ ಆಫ್ರಿಕನ್ ರಾಷ್ಟ್ರಗಳಿಂದ ಆಗಮಿಸುವ ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್ ಹಾಗೂ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಎಬೋಲಾ ಸೋಂಕಿನ ಲಕ್ಷಣಗಳು ಕಂಡುಬಂದರೆ ತಕ್ಷಣ ಕ್ವಾರಂಟೈನ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ದೇಶದ ಪ್ರಮುಖ ಪ್ರಯೋಗಾಲಯಗಳಾದ ICMR ಮತ್ತು NIV ಗಳನ್ನು ಸಂಪೂರ್ಣ ಸಜ್ಜುಗೊಳಿಸಲಾಗಿದ್ದು, ಅಗತ್ಯ ಪರೀಕ್ಷಾ ಕಿಟ್‌ಗಳು ಮತ್ತು ತಂತ್ರಜ್ಞಾನ ಒದಗಿಸಲಾಗಿದೆ.

ಎಲ್ಲಾ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ವಿಶೇಷ ಮಾರ್ಗಸೂಚಿ ರವಾನಿಸಿರುವ ಕೇಂದ್ರ ಆರೋಗ್ಯ ಸಚಿವಾಲಯ, ಆಸ್ಪತ್ರೆಗಳಲ್ಲಿ ಪ್ರತ್ಯೇಕ ಐಸೊಲೇಷನ್ ವಾರ್ಡ್‌ಗಳನ್ನು ಸಿದ್ಧವಾಗಿಡಲು ಹಾಗೂ ಶಂಕಿತ ಪ್ರಕರಣಗಳ ಮೇಲೆ ನಿಗಾ ವಹಿಸಲು ಸೂಚಿಸಿದೆ. ಕೊರೊನಾ ಮಾದರಿಯ ಆತಂಕ ಸೃಷ್ಟಿಯಾಗದಂತೆ ಮುಂಚಿತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ

RELATED ARTICLES

LEAVE A REPLY

Please enter your comment!
Please enter your name here

Most Popular