Thursday, May 28, 2026
Flats for sale
Homeರಾಜ್ಯಬೆಳಗಾವಿ : ಬೆಳಗಾವಿಯಲ್ಲಿ ಎಸ್‌ಡಿಆರ್‌ಎಫ್ ಸಿಪಿಐ ಆತ್ಮಹತ್ಯೆ.

ಬೆಳಗಾವಿ : ಬೆಳಗಾವಿಯಲ್ಲಿ ಎಸ್‌ಡಿಆರ್‌ಎಫ್ ಸಿಪಿಐ ಆತ್ಮಹತ್ಯೆ.

ಬೆಳಗಾವಿ : ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF)ಯ ಸಿಪಿಐ ಶ್ರೀಶೈಲ್ ಚೌಗಲೆ (37) ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ನಗರದ ಚನ್ನಮ್ಮ ನಗರದಲ್ಲಿರುವ ತಮ್ಮ ಮನೆಯಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮನೆಯ ಕೋಣೆಯ ಬಾಗಿಲು ಹಾಕಿಕೊಂಡಿದ್ದರಿಂದ ಅನುಮಾನಗೊಂಡ ಪತ್ನಿ ತಕ್ಷಣವೇ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಅಧೀನ ಸಿಬ್ಬಂದಿ ಬಾಗಿಲು ಮುರಿದು ಶ್ರೀಶೈಲ ಚೌಗಲೆ ಅವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹವನ್ನು ಬೆಳಗಾವಿಯ ಬೆಳಗಾವಿ ಇನ್ಸ್ಟಿಟ್ಯೂಟ್ ಆ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಈ ಘಟನೆ ಉದ್ಯಮ್ಬ್ಯಾಗ್ ಪೊಲೀಸ್ ಸ್ಟೇಷನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular