Tuesday, June 2, 2026
Flats for sale
Homeಸಿನಿಮಾಶಿವಮೊಗ್ಗ : ಅನಾರೋಗ್ಯದಿಂದ ಬಳಲುತ್ತಿರುವ ಅಭಿಮಾನಿಗೆ ವಿಡಿಯೋ ಕಾಲ್ ಮಾಡಿದ ನಟ ಯಶ್; ಆರೋಗ್ಯ ವಿಚಾರಿಸಿ...

ಶಿವಮೊಗ್ಗ : ಅನಾರೋಗ್ಯದಿಂದ ಬಳಲುತ್ತಿರುವ ಅಭಿಮಾನಿಗೆ ವಿಡಿಯೋ ಕಾಲ್ ಮಾಡಿದ ನಟ ಯಶ್; ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ರಾಕಿಂಗ್ ಸ್ಟಾರ್…!

ಶಿವಮೊಗ್ಗ : ಕನ್ನಡ ಚಿತ್ರರಂಗದ ನಟ Yash ಅವರು ತಮ್ಮ ಅಭಿಮಾನಿ ಹಾಗೂ ಯಶ್ ಫ್ಯಾನ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಸುನಿಲ್ ಕುಮಾರ್. ಏನ್ ಅವರಿಗೆ ವಿಡಿಯೋ ಕಾಲ್ ಮಾಡಿ ಆರೋಗ್ಯ ವಿಚಾರಿಸಿರುವ ಘಟನೆ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ರೆಕ್ಟಲ್ ಕ್ಯಾನ್ಸರ್‌ನಿಂದ ಬಳಲುತ್ತಿರುವ ಸುನಿಲ್ ಕುಮಾರ್ ಅವರೊಂದಿಗೆ ಮಾತನಾಡಿದ ಯಶ್, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಇದೇ ವೇಳೆ ಕುಟುಂಬ ಸದಸ್ಯರೊಂದಿಗೆ ಕೂಡ ಮಾತನಾಡಿ ಸಾಂತ್ವನ ಹೇಳಿದರು.

ಅಭಿಮಾನಿಯ ಸಂಕಷ್ಟದ ಸಮಯದಲ್ಲಿ ತಮ್ಮ ಬೆಂಬಲ ಸದಾ ಇರುತ್ತದೆ ಎಂದು ಯಶ್ ಭರವಸೆ ನೀಡಿದ್ದು, ಕುಟುಂಬದೊಂದಿಗೆ ತಾವು ನಿಲ್ಲುವುದಾಗಿ ತಿಳಿಸಿದ್ದಾರೆ.

ಯಶ್ ಅವರ ಈ ಮಾನವೀಯ ನಡೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದ್ದು, ಅಭಿಮಾನಿಗಳೊಂದಿಗೆ ಅವರು ಹೊಂದಿರುವ ಆತ್ಮೀಯ ಸಂಬಂಧಕ್ಕೆ ಮತ್ತೊಂದು ಉದಾಹರಣೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular