Friday, July 3, 2026
Homeಜಿಲ್ಲೆಮಂಗಳೂರು : ಕೂಳೂರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಭೀಕರ ರಸ್ತೆ ಅಪಘಾತ; ಕಂಟೈನರ್ ಲಾರಿ ಡಿಕ್ಕಿಗೆ ಸ್ಕೂಟರ್...

ಮಂಗಳೂರು : ಕೂಳೂರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಭೀಕರ ರಸ್ತೆ ಅಪಘಾತ; ಕಂಟೈನರ್ ಲಾರಿ ಡಿಕ್ಕಿಗೆ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು.

ಮಂಗಳೂರು : ನಗರದ ಕೂಳೂರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಸದಾನಂದ ಶೆಟ್ಟಿಗಾರ್ (46) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಜುಲೈ 3ರಂದು ಸಂಜೆ ಸುಮಾರು 6:15 ಗಂಟೆಗೆ, KA-19 HT-5288 ಸಂಖ್ಯೆಯ ಸ್ಕೂಟರ್‌ನಲ್ಲಿ ಕೊಟ್ಟಾರ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸದಾನಂದ ಶೆಟ್ಟಿಗಾರ್ ಅವರು, ಕೂಳೂರಿನ ವಿ.ಆರ್.ಎಲ್. ಕಚೇರಿ ಎದುರು ತಲುಪಿದ ವೇಳೆ, ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ KA-19 AE-0785 ಸಂಖ್ಯೆಯ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದೆ.

ಲಾರಿಯನ್ನು ಚಾಲಕ ಮಹಮ್ಮದ್ ಅಜರುದ್ದೀನ್ ಅವರು ನಿರ್ಲಕ್ಷ್ಯ ಹಾಗೂ ದುಡುಕುತನದಿಂದ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಡಿಕ್ಕಿಯ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular