Tuesday, July 14, 2026
Homeಜಿಲ್ಲೆಉಡುಪಿ : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಅಣ್ಣಾಮಲೈ ಭೇಟಿ ; ವಿಶೇಷ ಪೂಜೆ ಸಲ್ಲಿಕೆ.

ಉಡುಪಿ : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಅಣ್ಣಾಮಲೈ ಭೇಟಿ ; ವಿಶೇಷ ಪೂಜೆ ಸಲ್ಲಿಕೆ.

ಉಡುಪಿ : ಉಡುಪಿ ಜಿಲ್ಲೆಯ ಪ್ರಸಿದ್ಧ ಶಕ್ತಿ ಪೀಠವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ರಾಜಕೀಯ ನಾಯಕ ಕೆ. ಅಣ್ಣಾಮಲೈ ಅವರು ಮಂಗಳವಾರ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇವಳಕ್ಕೆ ಆಗಮಿಸಿದ ಅಣ್ಣಾಮಲೈ ಅವರನ್ನು ದೇವಳದ ಆಡಳಿತ ಮಂಡಳಿ ಹಾಗೂ ಅರ್ಚಕ ವೃಂದ ಆತ್ಮೀಯವಾಗಿ ಸ್ವಾಗತಿಸಿತು. ಬಳಿಕ ಅವರು ದೇವಿಯ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ರಾಜ್ಯ ಹಾಗೂ ದೇಶದ ಸುಖ-ಶಾಂತಿ, ಸಮೃದ್ಧಿಗಾಗಿ ಪ್ರಾರ್ಥಿಸಿದರು. ದರ್ಶನದ ಬಳಿಕ ದೇವಳದ ವತಿಯಿಂದ ದೇವಿಯ ಪ್ರಸಾದ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅಣ್ಣಾಮಲೈ ಸಾಕಷ್ಟು ಸುದ್ದಿಯಲ್ಲಿದ್ದಾರೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಅವರು, ಬಳಿಕ “ವಿ ದಿ ಲೀಡರ್” (We The Leader) ಎಂಬ ಹೊಸ ರಾಜಕೀಯ ಚಳವಳಿಯನ್ನು ಆರಂಭಿಸಿರುವುದಾಗಿ ಘೋಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಚಳವಳಿ ರಾಜಕೀಯ ಪಕ್ಷವಾಗಿ ರೂಪುಗೊಂಡು ತಮಿಳುನಾಡಿನಲ್ಲಿ ಹೊಸ ರಾಜಕೀಯ ಪರ್ಯಾಯವನ್ನು ನೀಡುವ ಉದ್ದೇಶ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರ ಕೊಲ್ಲೂರು ಭೇಟಿ ರಾಜಕೀಯ ವಲಯದಲ್ಲೂ ಕುತೂಹಲಕ್ಕೆ ಕಾರಣವಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular