Wednesday, July 15, 2026
Homeಜಿಲ್ಲೆಕುಂದಾಪುರ : ಹೃದಯಾಘಾತದಿಂದ ವಿಜಯಕರ್ನಾಟಕ ವರದಿಗಾರ ನಾಗೇಶ್ ಗಾಣಿಗ ನಿಧನ.

ಕುಂದಾಪುರ : ಹೃದಯಾಘಾತದಿಂದ ವಿಜಯಕರ್ನಾಟಕ ವರದಿಗಾರ ನಾಗೇಶ್ ಗಾಣಿಗ ನಿಧನ.

ಕುಂದಾಪುರ : ಕುಂದಾಪುರ ತಾಲೂಕಿನ ಸಿದ್ದಾಪುರ ಭಾಗದ ವಿಜಯಕರ್ನಾಟಕ ಪತ್ರಿಕೆಯ ವರದಿಗಾರರಾಗಿದ್ದ ಹಿರಿಯ ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸರಳ ವ್ಯಕ್ತಿತ್ವ, ಸ್ನೇಹಪರ ನಡೆ ಹಾಗೂ ವೃತ್ತಿನಿಷ್ಠೆಯಿಂದ ಗುರುತಿಸಿಕೊಂಡಿದ್ದ ನಾಗೇಶ್ ಗಾಣಿಗ ಅವರು ಸಿದ್ದಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನಪರ ಸಮಸ್ಯೆಗಳು, ಸ್ಥಳೀಯ ಬೆಳವಣಿಗೆಗಳು ಮತ್ತು ಪ್ರಮುಖ ಸುದ್ದಿಗಳನ್ನು ಪರಿಣಾಮಕಾರಿಯಾಗಿ ವರದಿ ಮಾಡುವ ಮೂಲಕ ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಅವರ ಅಕಾಲಿಕ ನಿಧನಕ್ಕೆ ಪತ್ರಕರ್ತರು, ಸಹೋದ್ಯೋಗಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಕ್ಷೇತ್ರಕ್ಕೆ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular