Thursday, July 16, 2026
Homeಜಿಲ್ಲೆಮಂಗಳೂರು : ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಪುನೀತ್ ಕೆರೆಹಳ್ಳಿ ಆಗ್ರಹ.

ಮಂಗಳೂರು : ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಪುನೀತ್ ಕೆರೆಹಳ್ಳಿ ಆಗ್ರಹ.

ಮಂಗಳೂರು : ಬೆಂಗಳೂರಿನ ಲಾರಿಪಾಳ್ಯದಲ್ಲಿ ಗೋ ರಕ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉರ್ವ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ಟೀಕಿಸಿದರು.

ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಸಮರ್ಪಕ ಕಾರ್ಯಾಚರಣೆ ನಡೆಯುತ್ತಿಲ್ಲ ಎಂದು ಆರೋಪಿಸಿದ ಅವರು, ಪೊಲೀಸರು ಕಠಿಣ ಕ್ರಮ ಕೈಗೊಳ್ಳದಿದ್ದರೆ ಬೆಂಗಳೂರಿನ ಮಾದರಿಯಲ್ಲೇ ಮಂಗಳೂರಿನಲ್ಲೂ ಕಾರ್ಯಾಚರಣೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ತಮ್ಮ ಬಳಿ ಅಕ್ರಮ ವಲಸಿಗರ ಕುರಿತು ದಾಖಲೆಗಳು ಮತ್ತು ಮಾಹಿತಿ ಇದ್ದು, ಯಾವ ಪ್ರದೇಶಗಳಲ್ಲಿ ಹಾಗೂ ಯಾವ ಮಾಲ್‌ಗಳಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ ಎಂಬ ವಿವರಗಳನ್ನು ಪೊಲೀಸರಿಗೆ ನೀಡಲು ಸಿದ್ಧವಿದ್ದೇವೆ ಎಂದು ಹೇಳಿದರು.

ಮಂಗಳೂರು ನಗರ ಪೊಲೀಸ್ ಆಯುಕ್ತರು ಸಹಕರಿಸಿದರೆ ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ನೆರವಾಗುವುದಾಗಿ ತಿಳಿಸಿದರು. ಅಕ್ರಮ ಬಾಂಗ್ಲಾ ವಲಸಿಗರಿಗೆ ಕರ್ನಾಟಕದಲ್ಲಿ ಆಧಾರ್ ಕಾರ್ಡ್ ಮತ್ತು ಪಾಸ್‌ಪೋರ್ಟ್‌ಗಳು ದೊರೆಯುತ್ತಿವೆ ಎಂದು ಆರೋಪಿಸಿದ ಪುನೀತ್ ಕೆರೆಹಳ್ಳಿ, ರಾಜ್ಯದ ಗುಪ್ತಚರ ಇಲಾಖೆ ಹಾಗೂ ಗೃಹ ಇಲಾಖೆಯ ಕಾರ್ಯವೈಖರಿಯನ್ನು ಟೀಕಿಸಿದರು. ರಾಜ್ಯದ ಮಹಾನಗರಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಕ್ರಮ ವಲಸಿಗರು ನೆಲೆಸಿದ್ದಾರೆ ಎಂದು ಕೂಡ ಆರೋಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular