Sunday, July 19, 2026
Homeಜಿಲ್ಲೆಮೂಡುಬಿದಿರೆ : ಮನೆಯಲ್ಲಿ ನೇಣು ಬಿಗಿದುಕೊಂಡು ವಿವಾಹಿತೆ ಆತ್ಮಹತ್ಯೆ.

ಮೂಡುಬಿದಿರೆ : ಮನೆಯಲ್ಲಿ ನೇಣು ಬಿಗಿದುಕೊಂಡು ವಿವಾಹಿತೆ ಆತ್ಮಹತ್ಯೆ.

ಮೂಡುಬಿದಿರೆ : ಮೂಡುಬಿದಿರೆ ಸಮೀಪದ ಮಿಜಾರ್‌ನ ಕೊಪ್ಪಡಕುಮೇರಿ ಪ್ರದೇಶದಲ್ಲಿ ವಿವಾಹಿತೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜುಲೈ 17ರ ಸಂಜೆ ನಡೆದಿದೆ.

ಮೃತರನ್ನು ಸ್ನೇಹಾ ಎಂದು ಗುರುತಿಸಲಾಗಿದ್ದು, ಅವರು ಅರ್ಚಕರಾದ ಗುರು ಭಟ್ ಅವರ ಪತ್ನಿಯಾಗಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಮೃತರು ಪತಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular