Tuesday, July 21, 2026
Homeರಾಜ್ಯಮೈಸೂರು : ಟಿ. ನರಸೀಪುರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ; 24 ಗಂಟೆಯಲ್ಲೇ ಮೂವರು...

ಮೈಸೂರು : ಟಿ. ನರಸೀಪುರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ; 24 ಗಂಟೆಯಲ್ಲೇ ಮೂವರು ಆರೋಪಿಗಳ ಬಂಧನ.

ಮೈಸೂರು : ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದ್ದು, ಪ್ರಕರಣವು ತೀವ್ರ ಸಂಚಲನ ಮೂಡಿಸಿದೆ.

ಪೊಲೀಸರ ಮಾಹಿತಿ ಪ್ರಕಾರ, ಎರಡು ದಿನಗಳ ಹಿಂದೆ ಟಿ. ನರಸೀಪುರದ ಖಾಸಗಿ ಬಸ್ ನಿಲ್ದಾಣದ ಸಮೀಪ ಯುವತಿಯನ್ನು ಅಪಹರಿಸಿದ ಆರೋಪಿಗಳು, ಬಳಿಕ ಚಾಮರಾಜನಗರ ಜಿಲ್ಲೆಯ ಸಂತೇಮರಳ್ಳಿ ಸಮೀಪದ ಲಾಡ್ಜ್‌ಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಪ್ರಕರಣ ಸಂಬಂಧ ಟಿ. ನರಸೀಪುರ ನಿವಾಸಿಗಳಾದ ಕಿರಣ್, ಕಿಶೋರ್ ಹಾಗೂ ರಿಯಾನ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 24 ಗಂಟೆಗಳೊಳಗೆ ಆರೋಪಿಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಕುರಿತು ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular