Tuesday, August 4, 2026
Homeಸಿನಿಮಾಮಂಗಳೂರು : ಗೋಲ್ಡನ್ ಮೂವೀಸ್‌ನ 'ತುಳು-ಕನ್ನಡ ದ್ವಿಭಾಷಾ ಸಿನಿಮಾ 'ಪಿಕ್ಚರ್' ' ಆಗಸ್ಟ್ 7ರಂದು ರಾಜ್ಯಾದ್ಯಂತ...

ಮಂಗಳೂರು : ಗೋಲ್ಡನ್ ಮೂವೀಸ್‌ನ ‘ತುಳು-ಕನ್ನಡ ದ್ವಿಭಾಷಾ ಸಿನಿಮಾ ‘ಪಿಕ್ಚರ್’ ‘ ಆಗಸ್ಟ್ 7ರಂದು ರಾಜ್ಯಾದ್ಯಂತ ಬಿಡುಗಡೆ.

ಮಂಗಳೂರು : ಸಂದೀಪ್ ಬೆದ್ರ ನಿರ್ದೇಶನದ ಗೋಲ್ಡನ್ ಮೂವೀಸ್ ಬ್ಯಾನರ್‌ನ ತುಳು-ಕನ್ನಡ ದ್ವಿಭಾಷಾ ಸಿನಿಮಾ ‘ಪಿಕ್ಚರ್’ ಆಗಸ್ಟ್ 7ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಿರ್ಮಾಪಕಿ ಶಿಲ್ಪಾ ಗಣೇಶ್ ಮಾತನಾಡಿ, ಕಾಮಿಡಿ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪುತ್ತೂರು ಮತ್ತು ಉಡುಪಿಯಲ್ಲಿ ನಡೆದ ಪ್ರೀಮಿಯರ್ ಪ್ರದರ್ಶನಗಳಲ್ಲಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತುಳು ಚಿತ್ರರಂಗದ ಹಿರಿಯ ಕಲಾವಿದರು ಮತ್ತು ತಾಂತ್ರಿಕ ತಂಡದ ಸಹಕಾರದಿಂದ ಚಿತ್ರವನ್ನು ಗುಣಮಟ್ಟದ ರೀತಿಯಲ್ಲಿ ನಿರ್ಮಿಸಲಾಗಿದೆ ಎಂದು ಹೇಳಿದರು.

ಗೋಲ್ಡನ್ ಸ್ಟಾರ್ ಗಣೇಶ್ ಮಾತನಾಡಿ, ತುಳು ಭಾಷೆ ಹಾಗೂ ಕರಾವಳಿಯ ಸಂಸ್ಕೃತಿಯ ಮೇಲಿನ ಅಭಿಮಾನದಿಂದ ಈ ಚಿತ್ರವನ್ನು ನಿರ್ಮಿಸಿದ್ದು, ಹೊಸ ಪ್ರತಿಭೆಗಳ ಜೊತೆಗೆ ಹಿರಿಯ ಕಲಾವಿದರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿರುವುದು ಚಿತ್ರದ ವಿಶೇಷತೆ ಎಂದರು.

ಹಿರಿಯ ನಟ ದೇವದಾಸ್ ಕಾಪಿಕಾಡ್ ಮಾತನಾಡಿ, ‘ಪಿಕ್ಚರ್’ ತುಳು ಚಿತ್ರರಂಗಕ್ಕೆ ಮತ್ತೊಂದು ಉತ್ತಮ ಕೊಡುಗೆಯಾಗಲಿದ್ದು, ನಾಯಕ ನಟ ನಿತ್ಯಪ್ರಕಾಶ್ ಬಂಟ್ವಾಳ್ ಅವರ ಅಭಿನಯ ಪ್ರೇಕ್ಷಕರ ಗಮನ ಸೆಳೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರದಲ್ಲಿ ನಿತ್ಯಪ್ರಕಾಶ್ ಬಂಟ್ವಾಳ್ ಮತ್ತು ಅಮೃತಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ದೇವದಾಸ್ ಕಾಪಿಕಾಡ್, ನವೀನ್ ಡಿ. ಪಡೀಲ್, ಭೋಜರಾಜ್ ವಾಮಂಜೂರು, ಅರವಿಂದ್ ಬೋಳಾರ್, ಪುಷ್ಪರಾಜ್ ಬೊಳ್ಳಾರ್ ಹಾಗೂ ಅರ್ಜುನ್ ಕಾಪಿಕಾಡ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಸಂತೋಷ್ ರೈ ಹಾಗೂ ಚಂದ್ರಶೇಖರ್ ಕೆ.ಎಸ್. ಛಾಯಾಗ್ರಹಣ ನೀಡಿದ್ದು, ಸ್ಯಾಮ್ಯುಯೆಲ್ ಅಬಿ ಸಂಗೀತ ಸಂಯೋಜಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ನಾಯಕ ನಿತ್ಯಪ್ರಕಾಶ್ ಬಂಟ್ವಾಳ್, ನಾಯಕಿ ಅಮೃತಾ, ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು, ಅರ್ಜುನ್ ಕಾಪಿಕಾಡ್, ಸ್ಯಾಮ್ಯುಯೆಲ್ ಅಬಿ ಸೇರಿದಂತೆ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular