Thursday, August 6, 2026
Homeಜಿಲ್ಲೆಮಂಗಳೂರು : ಬಾರ್‌, ಪಬ್ ಗಳ ಮೇಲೆ ಅಬಕಾರಿ ದಾಳಿ ; ಅಪ್ರಾಪ್ತರಿಗೆ ಮದ್ಯ ಪೂರೈಸದಂತೆ...

ಮಂಗಳೂರು : ಬಾರ್‌, ಪಬ್ ಗಳ ಮೇಲೆ ಅಬಕಾರಿ ದಾಳಿ ; ಅಪ್ರಾಪ್ತರಿಗೆ ಮದ್ಯ ಪೂರೈಸದಂತೆ ಎಚ್ಚರಿಕೆ.

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮದ್ಯದೊಂದಿಗೆ ಆಹಾರ ಪೂರೈಸುವ ಬಾರ್‌ಗಳ ಮೇಲೆ ಬುಧವಾರ ರಾತ್ರಿ ಅಬಕಾರಿ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.

ದಾಳಿ ವೇಳೆ ಬಾರ್‌ಗೆ ಆಗಮಿಸಿದ್ದ ಗ್ರಾಹಕರ ಗುರುತಿನ ಚೀಟಿಗಳನ್ನು ಪರಿಶೀಲಿಸಲಾಯಿತು. ಅಪ್ರಾಪ್ತ ವಯಸ್ಕರಿಗೆ ಯಾವುದೇ ಕಾರಣಕ್ಕೂ ಮದ್ಯ ಪೂರೈಸಬಾರದು ಎಂದು ಬಾರ್‌ಗಳ ಸನ್ನದುದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಅಪ್ರಾಪ್ತರಿಗೆ ಮದ್ಯ ಪೂರೈಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದರು.

ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಅವರ ನಿರ್ದೇಶನದಂತೆ ನಡೆದ ಕಾರ್ಯಾಚರಣೆಗೆ ಮಂಗಳೂರು ಉಪವಿಭಾಗ–1ರ ಉಪ ಅಧೀಕ್ಷಕಿ ಗಾಯತ್ರಿ ಸಿ.ಎಚ್. ನೇತೃತ್ವ ವಹಿಸಿದ್ದರು. ಅಬಕಾರಿ ನಿರೀಕ್ಷಕರಾದ ಚೇತನ್ ಕುಮಾರ್, ಪ್ರತಿಭಾ, ಮಿಲ್ಲರ್ ಜಾನ್ಸನ್ ಡಿಸೋಜ, ಕಮಲ, ದತ್ತಗುರು, ಉಪನಿರೀಕ್ಷಕರಾದ ರಜಾಕ್, ಜಯಪ್ಪ ಹಾಗೂ ಸಿಬ್ಬಂದಿ ಸಂದೀಪ್, ಸಂಧ್ಯಾ, ಶಿವಲಿಂಗಪ್ಪ, ಆನಂದ್, ಮಂಜಪ್ಪ ಮತ್ತು ದೇವರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular