Tuesday, August 11, 2026
Homeಜಿಲ್ಲೆಮೂಡಬಿದರೆ : ಮಿಜಾರ್ ಬಳಿ ಬಾಡಿಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟ ; ಮೂವರಿಗೆ ಗಂಭೀರ ಗಾಯ.

ಮೂಡಬಿದರೆ : ಮಿಜಾರ್ ಬಳಿ ಬಾಡಿಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟ ; ಮೂವರಿಗೆ ಗಂಭೀರ ಗಾಯ.

ಮೂಡಬಿದರೆ : ಮಿಜಾರ್ ಬಳಿ ಬಾಡಿಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರಿಗೆ ಸುಟ್ಟ ಗಾಯಗಳಾಗಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಬೆಳಗ್ಗೆ ಸುಮಾರು 6:30ರ ವೇಳೆಗೆ ಘಟನೆ ಸಂಭವಿಸಿದೆ. ಸಿಲಿಂಡರ್ ಸ್ಫೋಟದ ಪರಿಣಾಮ ಮನೆಯಲ್ಲಿದ್ದ ಆಳ್ವಾಸ್ ಕಾಲೇಜಿನ ವಾಚ್‌ಮನ್ ಶಿವರಾಮ್ (31), ಅವರ ಪತ್ನಿ ಗಂಗಾ (25) ಹಾಗೂ ಪುತ್ರ ಆದರ್ಶ್ (6) ಗಾಯಗೊಂಡಿದ್ದಾರೆ.

ಶಿವರಾಮ್ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಪತ್ನಿ ಗಂಗಾ ಹಾಗೂ ಪುತ್ರ ಆದರ್ಶ್‌ಗೂ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular