ಮಂಗಳೂರು : ಮಂಗಳೂರಿನ ಸಿಟಿ ಸೆಂಟರ್‌ನಲ್ಲಿರುವ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಕೊಳೆತ ಕೋಳಿ ಮಾಂಸ ಪತ್ತೆಯಾಗಿದೆ ಎನ್ನಲಾಗಿದ್ದು, ಘಟನೆ ಬೆನ್ನಲ್ಲೇ ಆರೋಗ್ಯ ಅಧಿಕಾರಿಗಳು ಮಳಿಗೆಗೆ ಬೀಗ ಜಡಿದಿದ್ದಾರೆ.






ಆಹಾರ ಸುರಕ್ಷತೆ ಹಾಗೂ ಗುಣಮಟ್ಟದ ಕುರಿತು ಪರಿಶೀಲನೆ ನಡೆಸಿದ ವೇಳೆ ಹಳೆಯ ಮಾಂಸ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಳಿಗೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಹಾಗೂ ಅಧಿಕಾರಿಗಳ ಪರಿಶೀಲನಾ ವರದಿ ನಿರೀಕ್ಷಿಸಲಾಗಿದೆ.

