ಲಖನೌ : ಹಿಜಾಬ್ ಇಸ್ಲಾಂ ಧರ್ಮದ ಅತ್ಯಾವಶ್ಯಕ ಅಥವಾ ಕಡ್ಡಾಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
11ನೇ ತರಗತಿಗೆ ಪ್ರವೇಶ ಪಡೆದ ವಿದ್ಯಾರ್ಥಿನಿಯೊಬ್ಬಳು ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ತನ್ನ ತಾಯಿಯ ನೆರವಿನಿಂದ ಅರ್ಜಿ ಸಲ್ಲಿಸಿದ್ದಳು. 1ರಿಂದ 10ನೇ ತರಗತಿವರೆಗೆ ಹಿಜಾಬ್ ಧರಿಸುತ್ತಿದ್ದ ವಿದ್ಯಾರ್ಥಿನಿಗೆ, 11ನೇ ತರಗತಿಯಲ್ಲೂ ಅದನ್ನು ಮುಂದುವರಿಸಲು ಅವಕಾಶ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಅದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಇತರ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸುತ್ತಿಲ್ಲ ಎಂಬ ಅಂಶವನ್ನೂ ಗಮನಿಸಿತು.
ಹಿಜಾಬ್ ಇಸ್ಲಾಂ ಧರ್ಮದ ಕಡ್ಡಾಯ ಧಾರ್ಮಿಕ ಆಚರಣೆ ಎಂಬುದನ್ನು ಸಾಬೀತುಪಡಿಸುವ ಸೂಕ್ತ ಸಾಕ್ಷ್ಯಾಧಾರಗಳನ್ನು ಅರ್ಜಿದಾರರು ಒದಗಿಸಿಲ್ಲ ಎಂದು ಕೋರ್ಟ್ ಹೇಳಿದೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

