Monday, August 31, 2026
Homeಜಿಲ್ಲೆಮಂಗಳೂರು : ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿಯ ಕಾರ್ಯಾಚರಣೆ,ಲಿಫ್ಟ್‌ನಲ್ಲಿ ಸಿಲುಕಿದ್ದ ಅಸ್ಸಾಂ ಮೂಲದ ಯುವಕ ರಕ್ಷಣೆ.

ಮಂಗಳೂರು : ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿಯ ಕಾರ್ಯಾಚರಣೆ,ಲಿಫ್ಟ್‌ನಲ್ಲಿ ಸಿಲುಕಿದ್ದ ಅಸ್ಸಾಂ ಮೂಲದ ಯುವಕ ರಕ್ಷಣೆ.

ಮಂಗಳೂರು : ಅಪಾರ್ಟ್‌ಮೆಂಟ್‌ನ ಲಿಫ್ಟ್‌ನಲ್ಲಿ ಸಿಲುಕಿಕೊಂಡು ಹೊರಬರಲಾಗದೆ ಸಂಕಷ್ಟಕ್ಕೊಳಗಾಗಿದ್ದ ಅಸ್ಸಾಂ ಮೂಲದ 33 ವರ್ಷದ ಯುವಕನನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ತ್ವರಿತ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ಕಾಲೇಜು ಮುಂಭಾಗ, ರೈಲ್ವೆ ಟ್ರ್ಯಾಕ್ ಸಮೀಪದ ಮಿಜಾರ್ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದೆ. ಅಸ್ಸಾಂ ಮೂಲದ ಕೇಶವ್ (33) ಲಿಫ್ಟ್‌ನೊಳಗೆ ತೆರಳಿದ್ದ ವೇಳೆ, ಗ್ರೌಂಡ್ ಫ್ಲೋರ್‌ನಲ್ಲಿ ತಾಂತ್ರಿಕ ದೋಷದಿಂದ ಲಿಫ್ಟ್ ಏಕಾಏಕಿ ಸ್ಥಗಿತಗೊಂಡಿದೆ. ಪರಿಣಾಮ ಕೇಶವ್ ಲಿಫ್ಟ್‌ನೊಳಗೆ ಸಿಲುಕಿಕೊಂಡಿದ್ದರು.

ಮಾಹಿತಿ ದೊರೆತ ತಕ್ಷಣ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಹಳೆಯ ಮಾದರಿಯ ಲಿಫ್ಟ್ ಆಗಿದ್ದರಿಂದ ಸಾಮಾನ್ಯ ಕೀ ಬಳಸಿ ಬಾಗಿಲು ತೆರೆಯಲು ಸಾಧ್ಯವಾಗಲಿಲ್ಲ.

ಹೀಗಾಗಿ ಅಗ್ನಿಶಾಮಕ ಸಿಬ್ಬಂದಿ ಹೈಡ್ರಾಲಿಕ್ ಸ್ಪ್ರೆಡರ್ ಉಪಕರಣ ಬಳಸಿ ಲಿಫ್ಟ್‌ನ ಬಾಗಿಲು ತೆರೆದು, ಒಳಗೆ ಸಿಲುಕಿದ್ದ ಕೇಶವ್ ಅವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular