Friday, September 4, 2026
Homeಜಿಲ್ಲೆಮಂಗಳೂರು : ಕೃಷ್ಣ ಜನ್ಮಾಷ್ಟಮಿ : ದಕ್ಷಿಣ ಕನ್ನಡದಲ್ಲಿ 3 ದಿನ ಮದ್ಯ ಮಾರಾಟ ನಿಷೇಧ.

ಮಂಗಳೂರು : ಕೃಷ್ಣ ಜನ್ಮಾಷ್ಟಮಿ : ದಕ್ಷಿಣ ಕನ್ನಡದಲ್ಲಿ 3 ದಿನ ಮದ್ಯ ಮಾರಾಟ ನಿಷೇಧ.

ಮಂಗಳೂರು : ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆಯಲಿರುವ ಮೊಸರುಕುಡಿಕೆ, ಮೆರವಣಿಗೆ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 4ರಿಂದ 6ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಜನ್ಮಾಷ್ಟಮಿ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದ್ದು, ಅಮಲು ಪದಾರ್ಥ ಸೇವಿಸಿ ಕಿಡಿಗೇಡಿಗಳು ಅಹಿತಕರ ಘಟನೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಆದೇಶ ಹೊರಡಿಸಿದ್ದು, ನಿಗದಿತ ದಿನಾಂಕಗಳಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ವ್ಯಾಪ್ತಿಯಲ್ಲಿರುವ ಬಾರ್, ವೈನ್ ಶಾಪ್ ಹಾಗೂ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಿದ್ದಾರೆ. ಸೆ.4ರಿಂದ 6ರವರೆಗೆ ಯಾವುದೇ ರೀತಿಯ ಮದ್ಯವನ್ನು ಮಾರಾಟ ಮಾಡದಂತೆ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಜನ್ಮಾಷ್ಟಮಿ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಬಂಧ ಜಾರಿಗೊಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular