Monday, September 21, 2026
Homeರಾಜ್ಯಮೈಸೂರು : ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ ಕಾಡಾನೆ ದಾಳಿಗೆ ವ್ಯಕ್ತಿ ಬಲಿ.

ಮೈಸೂರು : ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ ಕಾಡಾನೆ ದಾಳಿಗೆ ವ್ಯಕ್ತಿ ಬಲಿ.

ಮೈಸೂರು : ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸರಗೂರು ತಾಲೂಕಿನ ದೊಡ್ಡಬರಗಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ವೀರಭದ್ರೆಗೌಡ (60) ಎಂದು ಗುರುತಿಸಲಾಗಿದೆ. ಅವರು ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ದಾರಿಯಲ್ಲಿ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ವೀರಭದ್ರೆಗೌಡ ಮೃತಪಟ್ಟಿದ್ದಾರೆ.

ಘಟನೆ ಮಾಹಿತಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular