Sunday, September 27, 2026
Homeಜಿಲ್ಲೆಮಂಗಳೂರು: ಬಿ.ಸಿ.ರೋಡ್ ಚಲೋಗೆ ಸಜ್ಜಾದ ವಿಎಚ್‌ಪಿ–ಭಜರಂಗದಳ ; 300ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ, ಭಾರೀ ಪೊಲೀಸ್...

ಮಂಗಳೂರು: ಬಿ.ಸಿ.ರೋಡ್ ಚಲೋಗೆ ಸಜ್ಜಾದ ವಿಎಚ್‌ಪಿ–ಭಜರಂಗದಳ ; 300ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ, ಭಾರೀ ಪೊಲೀಸ್ ಬಂದೋಬಸ್ತ್

ಬಂಟ್ವಾಳ : ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಕಾಯಿದೆ ಜಾರಿಗೊಳಿಸಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹಾಗೂ ಭಜರಂಗದಳದ ನೇತೃತ್ವದಲ್ಲಿ ಸೆ.28ರಂದು ಬಂಟ್ವಾಳದ ಬಿ.ಸಿ.ರೋಡ್‌ನಲ್ಲಿ ‘ಬಿ.ಸಿ.ರೋಡ್ ಚಲೋ’ ಪ್ರತಿಭಟನೆ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಕ್ರಮವನ್ನು ವಿರೋಧಿಸಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇದೇ ವೇಳೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಪೊಲೀಸ್ ನೋಟಿಸ್ ನೀಡಿರುವುದಕ್ಕೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಹಿಂದೂ ಕಾರ್ಯಕರ್ತರ ವಿರುದ್ಧ ಪೊಲೀಸರು ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಆರೋಪಿಗಳ ಪೈಕಿ ಎಂಟು ಮಂದಿಗೆ ಮೈಸೂರು ಕೋಕಾ ನ್ಯಾಯಾಲಯ ಜಾಮೀನು ನೀಡಿತ್ತು ಎಂದು ಸಂಘಟನೆಗಳು ತಿಳಿಸಿವೆ. ಆದರೆ, ಜಾಮೀನು ದೊರೆತ ಬಳಿಕ ಬಿಡುಗಡೆಗೂ ಮುನ್ನವೇ ಆರೋಪಿಗಳ ವಿರುದ್ಧ ಗೂಂಡಾ ಕಾಯಿದೆ ಜಾರಿಗೊಳಿಸಲಾಗಿದೆ ಎಂದು ವಿಎಚ್‌ಪಿ ಹಾಗೂ ಭಜರಂಗದಳ ಆರೋಪಿಸಿದೆ.

ಭಜರಂಗದಳ ಮುಖಂಡ ಭರತ್ ಕುಮ್ಡೇಲು ಸೇರಿದಂತೆ ಆರು ಮಂದಿಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾಡಳಿತ ಗೂಂಡಾ ಕಾಯಿದೆ ಅಡಿ ಕ್ರಮ ಕೈಗೊಂಡಿರುವುದನ್ನು ಸಂಘಟನೆಗಳು ವಿರೋಧಿಸಿವೆ. ರೆಹಮಾನ್ ಹತ್ಯೆ ಪ್ರಕರಣದಲ್ಲಿ ಭಜರಂಗದಳದ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂಬ ಆರೋಪವನ್ನೂ ಸಂಘಟನೆಗಳು ಮಾಡಿವೆ.

ಈ ಎಲ್ಲ ಬೆಳವಣಿಗೆಗಳನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿ.ಸಿ.ರೋಡ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಂಘಟನೆಗಳು ನಿರ್ಧರಿಸಿವೆ.

ಪ್ರತಿಭಟನೆಗೆ ಭಾರೀ ಪೊಲೀಸ್ ಬಂದೋ ಬಸ್ತ್ .28ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಸಿ.ರೋಡ್‌ನಲ್ಲಿ ನಡೆಯಲಿರುವ ಪ್ರತಿಭಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಮಾಡಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಸೆ.27ರಂದು ಬಿ.ಸಿ.ರೋಡ್ ಪರಿಸರದಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಬಂದೋಬಸ್ತ್‌ಗೆ ನಿಯೋಜನೆ ಹೆಚ್ಚುವರಿ ಪೊಲೀಸ್.

ಅಧೀಕ್ಷಕರು – 01 ಸಹಾಯಕ ಪೊಲೀಸ್ ಅಧೀಕ್ಷಕರು – 01
ಪೊಲೀಸ್ ನಿರೀಕ್ಷಕರು – 08 ಪೊಲೀಸ್ ಉಪನಿರೀಕ್ಷಕರು – 23
ಸಹಾಯಕ ಪೊಲೀಸ್ ಉಪನಿರೀಕ್ಷಕರು – 34 ಪೊಲೀಸ್ ಸಿಬ್ಬಂದಿ – 184bಹೋಮ್‌ಗಾರ್ಡ್ – 05bಎಸ್‌ಎಎಫ್ ತುಕಡಿ – 02bಡಿಎಆರ್ ತುಕಡಿ – 03 ಕೆಎಸ್‌ಆರ್‌ಪಿ ತುಕಡಿ – 04
ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಿ.ಸಿ.ರೋಡ್ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್‌ ಬಿಗಿಗೊಳಿಸಲಾಗಿದ್ದು, ಪ್ರತಿಭಟನೆ ಶಾಂತಿಯುತವಾಗಿ ನಡೆಯುವಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular