Tuesday, October 6, 2026
Homeಜಿಲ್ಲೆಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋಗಿ ಮೂವರು 6ನೇ ತರಗತಿ ವಿದ್ಯಾರ್ಥಿಗಳ ದಾರುಣ ಸಾವು..!

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋಗಿ ಮೂವರು 6ನೇ ತರಗತಿ ವಿದ್ಯಾರ್ಥಿಗಳ ದಾರುಣ ಸಾವು..!

ಚಿಕ್ಕಮಗಳೂರು : ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದ ಚಿಕ್ಕ ಕೆರೆಯಲ್ಲಿ ನಡೆದಿದೆ.

ಮೃತ ಮಕ್ಕಳನ್ನು ತರುಣ್, ಭುವನ್ ಹಾಗೂ ಲಿಖಿತ್ ಎಂದು ಗುರುತಿಸಲಾಗಿದೆ. ಮೂವರೂ 12 ವರ್ಷದ 6ನೇ ತರಗತಿ ವಿದ್ಯಾರ್ಥಿಗಳಾಗಿದ್ದು, ಶಾಲೆಗೆ ರಜೆ ಇದ್ದ ಕಾರಣ ಕೆರೆಗೆ ಈಜಲು ತೆರಳಿದ್ದರು ಎನ್ನಲಾಗಿದೆ.

ಕೆರೆಯಲ್ಲಿದ್ದ ಗುಂಡಿಯಲ್ಲಿ ಈಜಲು ತೆರಳಿದ ವೇಳೆ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆ ತಿಳಿದು ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಮೂವರು ಮಕ್ಕಳ ದಾರುಣ ಸಾವಿನಿಂದ ಮರ್ಲೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular