Thursday, October 8, 2026
Homeಸಿನಿಮಾಮುಂಬೈ/ಪಣಜಿ : ಹಿರಿಯ ನಟ ನಾನಾ ಪಾಟೇಕರ್ ನಿಧನ : 75ನೇ ವಯಸ್ಸಿನಲ್ಲಿ ಕೊನೆಯುಸಿರು.

ಮುಂಬೈ/ಪಣಜಿ : ಹಿರಿಯ ನಟ ನಾನಾ ಪಾಟೇಕರ್ ನಿಧನ : 75ನೇ ವಯಸ್ಸಿನಲ್ಲಿ ಕೊನೆಯುಸಿರು.

ಮುಂಬೈ/ಪಣಜಿ : ಹಿರಿಯ ನಟ ನಾನಾ ಪಾಟೇಕರ್ (75) ಅವರು ಗೋವಾದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಮುಂಜಾನೆ ಗೋವಾದ ಡೊನಾ ಪೌಲಾ ನಿವಾಸದಲ್ಲಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆಸ್ಪತ್ರೆಯಲ್ಲಿ ವೈದ್ಯರು ಸುಮಾರು 45 ನಿಮಿಷಗಳ ಕಾಲ ಪುನಶ್ಚೇತನಗೊಳಿಸಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ದೊರೆಯಲಿಲ್ಲ. ಬೆಳಗ್ಗೆ 5.20ರ ಸುಮಾರಿಗೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಹಾಗೂ ಶಕ್ತಿಯುತ ಅಭಿನಯದ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಅಭಿಮಾನಿಗಳಲ್ಲಿ ಆಘಾತ ಮತ್ತು ಶೋಕಕ್ಕೆ ಕಾರಣವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular