Saturday, October 31, 2026
Homeಜಿಲ್ಲೆಮಂಗಳೂರು : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ,ಸೌಜನ್ಯ ಮೃತದೇಹ ಪತ್ತೆಯಾದ ಸ್ಥಳಕ್ಕೆ ಎಸ್‌ಐಟಿ...

ಮಂಗಳೂರು : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ,ಸೌಜನ್ಯ ಮೃತದೇಹ ಪತ್ತೆಯಾದ ಸ್ಥಳಕ್ಕೆ ಎಸ್‌ಐಟಿ ತಂಡ ಭೇಟಿ, ಮಣ್ಣಸಂಕದ ಕಾಡಿನಲ್ಲಿ ಸ್ಥಳ ಪರಿಶೀಲನೆ..!

ಮಂಗಳೂರು : ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಇಂದು ಸೌಜನ್ಯ ಅವರ ಮೃತದೇಹ ಪತ್ತೆಯಾಗಿದ್ದ ಸ್ಥಳಕ್ಕೆ ವಿಶೇಷ ತನಿಖಾ ತಂಡ (SIT) ಭೇಟಿ ನೀಡಿದೆ.

ತನಿಖಾಧಿಕಾರಿ ಲೋಕೇಶ್ ಜಗಲಸಾರ್ ಅವರ ನೇತೃತ್ವದ ಎಸ್‌ಐಟಿ ತಂಡ ಧರ್ಮಸ್ಥಳದ ಮಣ್ಣಸಂಕದ ಕಾಡಿಗೆ ಭೇಟಿ ನೀಡಿ, ಸೌಜನ್ಯ ಅವರ ಮೃತದೇಹ ಪತ್ತೆಯಾಗಿದ್ದ ಸ್ಥಳವನ್ನು ಪರಿಶೀಲಿಸಿದೆ.

ಈ ಹಿನ್ನೆಲೆಯಲ್ಲಿ ಮಣ್ಣಸಂಕ ಹಾಗೂ ಪಾಂಗಳ ಕ್ರಾಸ್ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸ್ಥಳ ಪರಿಶೀಲನೆ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಎಸ್‌ಐಟಿ ತಂಡದ ಆಗಮನಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪ್ರಕರಣದ ಮರುತನಿಖೆಯ ಭಾಗವಾಗಿ ನಡೆಯುತ್ತಿರುವ ಈ ಸ್ಥಳ ಪರಿಶೀಲನೆ ಮಹತ್ವ ಪಡೆದುಕೊಂಡಿದೆ. ತನಿಖಾ ತಂಡದ ಪರಿಶೀಲನೆಯ ವೇಳೆ ಯಾವೆಲ್ಲಾ ಅಂಶಗಳು ಬೆಳಕಿಗೆ ಬರಲಿವೆ ಎಂಬ ಕುತೂಹಲ ಮೂಡಿದೆ.

ಧರ್ಮಸ್ಥಳದ ಮಣ್ಣಸಂಕ ಪ್ರದೇಶದಲ್ಲಿ ಎಸ್‌ಐಟಿ ತಂಡದ ಸ್ಥಳ ಪರಿಶೀಲನೆಗೆ ಕ್ಷಣಗಣನೆ ಆರಂಭವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular