Monday, November 9, 2026
Homeಕ್ರೈಂಹಾಸನ : ಒಂದೇ ಕುಟುಂಬದ 7 ಮಂದಿಯ ಭೀಕರ ಹತ್ಯೆ ಪ್ರಕರಣ – 100 ಅಡಿ...

ಹಾಸನ : ಒಂದೇ ಕುಟುಂಬದ 7 ಮಂದಿಯ ಭೀಕರ ಹತ್ಯೆ ಪ್ರಕರಣ – 100 ಅಡಿ ಆಳದ ಕಂದಕದಿಂದ ನಳಿನಿ, ಶಂಕರ್ ಮೃತದೇಹಗಳ ಹೊರಕ್ಕೆ!

ಹಾಸನ : ಒಂದೇ ಕುಟುಂಬದ ಏಳು ಮಂದಿಯನ್ನು ಭೀಕರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಕಂದಕಕ್ಕೆ ಎಸೆಯಲಾಗಿದ್ದ ನಳಿನಿ ಮತ್ತು ಶಂಕರ್ ಅವರ ಮೃತದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ.

ಮಾರನಹಳ್ಳಿ ಸಮೀಪದ ಸುಮಾರು 100 ಅಡಿ ಆಳದ ಕಂದಕದಲ್ಲಿ ಮೃತದೇಹಗಳನ್ನು ಎಸೆಯಲಾಗಿತ್ತು. ಪೊಲೀಸರು ಹಗ್ಗದ ಸಹಾಯದಿಂದ ಕಾರ್ಯಾಚರಣೆ ನಡೆಸಿ, ಹರಸಾಹಸಪಟ್ಟು ಎರಡು ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ.

ಬಳಿಕ ಮೃತದೇಹಗಳನ್ನು ಆಂಬ್ಯುಲೆನ್ಸ್ ಮೂಲಕ ಹಾಸನದ ಹಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಇನ್ನೊಂದೆಡೆ, ಪ್ರಕರಣದ ಆರೋಪಿ ಇಂದುಶೇಖರ್‌ನನ್ನು ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆಗೂ ಸುಮಾರು ಒಂದು ಗಂಟೆ ಮುಂಚಿತವಾಗಿ ಪೊಲೀಸರು ಸ್ಥಳದಿಂದ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಮೃತದೇಹಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್‌ನ ಹಿಂದೆ ನಳಿನಿ ಮತ್ತು ಶಂಕರ್ ಅವರ ಕುಟುಂಬಸ್ಥರು ಬರುತ್ತಿರುವ ದೃಶ್ಯಗಳು ಕಂಡುಬಂದಿವೆ.

ನಳಿನಿ ಮತ್ತು ಶಂಕರ್ ಅವರ ಮೃತದೇಹಗಳನ್ನು ಕಂದಕಕ್ಕೆ ಎಸೆದಿರುವ ಆರೋಪ ಆರೋಪಿ ಇಂದುಶೇಖರ್ ಮೇಲಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದು, ಪೊಲೀಸರ ತನಿಖೆಯಿಂದ ಮತ್ತಷ್ಟು ಸತ್ಯಾಂಶಗಳು ಹೊರಬರಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular