Monday, November 16, 2026
Homeಜಿಲ್ಲೆಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

ಉಡುಪಿ : ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಮುಂಜಾನೆ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಪತ್ನಿಯೊಂದಿಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು, ದೇವಸ್ಥಾನದಲ್ಲಿ ನಡೆಯುತ್ತಿರುವ ನವಚಂಡಿಕಾಯಾಗದಲ್ಲೂ ಭಾಗವಹಿಸಿದರು. ಅರ್ಚಕರ ಮಾರ್ಗದರ್ಶನದಲ್ಲಿ ಪತ್ನಿಯೊಂದಿಗೆ ಸಂಕಲ್ಪದಲ್ಲಿ ಕುಳಿತು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ದೋಷ ಪರಿಹಾರಕ್ಕಾಗಿ ಸುಮಾರು ನಾಲ್ಕು ವರ್ಷಗಳ ಹಿಂದೆ ಮಾಡಿಕೊಂಡಿದ್ದ ಹರಕೆಯ ಹಿನ್ನೆಲೆಯಲ್ಲಿ ನವಚಂಡಿಕಾಯಾಗವನ್ನು ನೆರವೇರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಬೆಳಿಗ್ಗೆ 10 ಗಂಟೆಗೆ ಯಾಗದ ಪೂರ್ಣಾಹುತಿ ನಡೆಯಲಿದೆ.

ಬಳಿಕ ಎಚ್.ಡಿ. ಕುಮಾರಸ್ವಾಮಿ ಅವರು ಉಡುಪಿ ಜಿಲ್ಲೆಯ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:30ರ ಸುಮಾರಿಗೆ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಬಳಿಕ ಕೇಂದ್ರ ಸಚಿವರು ದಕ್ಷಿಣ ಕನ್ನಡ ಜಿಲ್ಲೆಯತ್ತ ತಮ್ಮ ಪ್ರವಾಸವನ್ನು ಮುಂದುವರಿಸಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular