ಮಂಗಳೂರುb: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಪ್ರಕರಣದ ಪ್ರಮುಖ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ.
ಈ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಮಂಗಳೂರಿನಲ್ಲಿರುವ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ಸಾಕ್ಷ್ಯಗಳು ಹಾಗೂ ಮಾಹಿತಿಗಳನ್ನು ತನಿಖಾ ತಂಡಕ್ಕೆ ಒದಗಿಸುವಂತೆ ಎಸ್ಐಟಿ ಸೂಚಿಸಿತ್ತು. ಅದರಂತೆ ತಿಮರೋಡಿ ಅವರು ವಿವಿಧ ದಾಖಲೆ ಪತ್ರಗಳು ಹಾಗೂ ಹಾರ್ಡ್ ಡಿಸ್ಕ್ನೊಂದಿಗೆ ಕಚೇರಿಗೆ ಹಾಜರಾಗಿದ್ದಾರೆ.
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮಲ್ಲಿರುವ ಮಾಹಿತಿ ಮತ್ತು ಸಾಕ್ಷ್ಯಗಳನ್ನು ಎಸ್ಐಟಿ ಅಧಿಕಾರಿಗಳಿಗೆ ನೀಡಲಿದ್ದು, ತನಿಖಾ ತಂಡವು ಈ ಮಾಹಿತಿಗಳನ್ನು ಪರಿಶೀಲಿಸಲಿದೆ.
ಸೌಜನ್ಯ ಪ್ರಕರಣದ ಮರುತನಿಖೆಯ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಎಸ್ಐಟಿ ಕಚೇರಿ ಭೇಟಿ ಕುತೂಹಲ ಮೂಡಿಸಿದೆ.

