ಮಂಗಳೂರು : ಕಾಡು ಪ್ರಾಣಿ ಭೇಟೆಗೆ ಇರಿಸಿದ ಉರುಳಿಗೆ ಸಿಲುಕಿ ಚಿರತೆಯೊಂದು ಪ್ರಾಣ ಬಿಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಹೊರ ವಲಯದ ಕಿನ್ನಿಗೋಳಿ ಸಮೀಪದ ಐಕಳ ಎಂಬಲ್ಲಿ ಘಟನೆ ನಡೆದಿದೆ.
ನಿನ್ನೆ ತಡ ರಾತ್ರಿ ಚಿರತೆ ಇದೇ ಹಾದಿಯಲ್ಲಿ ಬಂದು ಉರುಳಿಗೆ ಸಿಲುಕಿಕೊಂಡಿದೆ. ಉರುಳಿನಿಂದ ತಪ್ಪಿಸಿಕೊಳ್ಳಲು ಶತ ಪ್ರಯತ್ನ ಮಾಡಿದ ಚಿರತೆ ಉರುಳಿ ಬಿಗಿಯಾಗಿ ಉಸಿರುಗಟ್ಟಿ ಪ್ರಾಣ ಬಿಟ್ಟಿದೆ. ಇಂದು ಮುಂಜಾನೆ ಇದು ಗಮನಕ್ಕೆ ಬಂದಿದ್ದು ಅರಣ್ಯ ಇಲಾಕೆ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿದ್ದಾರೆ. ಉರುಳು ಇರಿಸಿದವರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸಲು ಮುಂದಾಗಿದ್ದಾರೆ.


