ಬೆಂಗಳೂರು : ರಾಜ್ಯದ ಎ ಮತ್ತು ಬಿ ಕೆಟಗರಿಯಲ್ಲಿ ಬರುವ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆದ್ಯತೆ ಮೇರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮನವಿ ಮಾಡಿದ್ದಾರೆ.
ಉದ್ದದ ಸರತಿ ಸಾಲಿನಲ್ಲಿ ನಿಲ್ಲಲು ಸಾಧ್ಯವಾಗದ ಕಾರಣ ಅವರ ವಯಸ್ಸಿಗೆ ಸಂಬಂಧಿಸಿದ ದಾಖಲೆಗಳಾದ ಆಧಾರ್ ಕಾರ್ಡ್ಗಳನ್ನು ಹಾಜರುಪಡಿಸಲು ಸಾಧ್ಯವಾದರೆ ಅಂತಹ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸ್ಥಳವನ್ನು ಒದಗಿಸುವಂತೆ ಇಲಾಖೆಯು ದೇವಸ್ಥಾನಗಳಿಗೆ ನಿರ್ದೇಶನ ನೀಡಿದೆ.
65 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ಸಹಾಯ ಮಾಡಲು ದೇವಾಲಯಗಳಲ್ಲಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಮತ್ತು ಅವುಗಳನ್ನು ನಿರ್ವಹಿಸಲು ಜವಾಬ್ದಾರಿಯುತ ಸಿಬ್ಬಂದಿಯನ್ನು ನಿಯೋಜಿಸಲು ಇಲಾಖೆಯು ದೇವಾಲಯಗಳನ್ನು ಕೇಳಿದೆ.


